MBBS ಯುವಕನ ಜೊತೆ ಓಡಿ ಹೋಗಿರುವ ಶಂಕೆ.
ಕಾರವಾರ: ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ಮದುವೆಗೆ ಕೆಲವೇ ಗಂಟೆಗಳಿರುವಾಗ ನಾಪತ್ತೆಯಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಇದೀಗ ಆತಂಕದ ಮೌನ ಆವರಿಸಿದೆ. ಶಿರಸಿ ನಗರದ ನಿವಾಸಿ ಸೀಫಾ ಖಾನ್ ನಾಪತ್ತೆಯಾಗಿರುವ ಯುವತಿ. MBBS ಓದುತ್ತಿದ್ದ ಯುವಕನೊಂದಿಗೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆಗೆ ಪೋಷಕರು ದೂರು ನೀಡಿದ್ದಾರೆ.
ನಡೆದಿದ್ದೇನು?
ಇಂದು (ಏಪ್ರಿಲ್ 25) ಮಧ್ಯಾಹ್ನ ಶಿರಸಿಯ ಉಸರಿ ರಸ್ತೆಯ ಕಲ್ಯಾಣ ಮಂಟಪದಲ್ಲಿ ಸೀಫಾ ಖಾನ್ ಮದುವೆ ನಿಶ್ಚಯವಾಗಿತ್ತು. ಮದುವೆಯ ಸಿದ್ಧತೆಗಳಲ್ಲಿ ಕುಟುಂಬಸ್ಥರೆಲ್ಲರೂ ಬ್ಯುಸಿಯಾಗಿದ್ದರು. ಆದರೆ, ವಧುವನ್ನು ಸಜ್ಜುಗೊಳಿಸಲು ಆಕೆಯ ಕೋಣೆಗೆ ಹೋಗಿ ನೋಡಿದಾಗ ಯುವತಿ ಕಾಣಿಸಲಿಲ್ಲ. ಮನೆಯವರು ಸುತ್ತಮುತ್ತ ಹಾಗೂ ಪರಿಚಿತರ ಮನೆಗಳಲ್ಲಿ ಎಷ್ಟೇ ಹುಡುಕಾಡಿದರೂ ಯಾವುದೇ ಸುಳಿವು ಸಿಕ್ಕಿಲ್ಲ.
ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಈ ಘಟನೆ ಬರಸಿಡಿಲಿನಂತೆ ಎರಗಿದೆ. ಎಲ್ಲಿ ಹುಡುಕಿದರೂ ಯುವತಿ ಪತ್ತೆಯಾಗದ ಹಿನ್ನೆಲೆಯಲ್ಲಿ, ಆತಂಕಕ್ಕೊಳಗಾದ ಪಾಲಕರು ಕೊನೆಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
MBBS ಯುವಕನೊಂದಿಗೆ ಓಡಿ ಹೋಗಿರುವ ಶಂಕೆ: ಪೊಲೀಸರಿಗೆ ದೂರು ನೀಡಿದ ಪೋಷಕರು
ಇನ್ನು ಸೀಫಾ ಖಾನ್, MBBS ಓದುತ್ತಿದ್ದ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಆತನೊಂದಿಗೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಕುಟುಂಬಸ್ಥರು ಅವರ ಪ್ರೀತಿಯನ್ನ ಒಪ್ಪಿರಲಿಲ್ಲ. ಇಂದು ಬೇರೆಯವರ ಜೊತೆ ಮದುವೆ ಮಾಡಲು ನಿಶ್ಚಯಿಸಿದ್ದರು. ಆದರೆ ಅಷ್ಟರಲ್ಲಿ ಯುವತಿ ನಾಪತ್ತೆ ಆಗಿದ್ದಾಳೆ. ಸದ್ಯ ಮಗಳನ್ನ ಹುಡುಕಿಕೊಡುವಂತೆ ಯುವತಿಯ ತಂದೆ ಝಹೀರ್ ಖಾನ್ ಶಿರಸಿಯ ಹೊಸ ಮಾರುಕಟ್ಟೆ ಠಾಣೆಗೆ ದೂರು ನೀಡಿದ್ದಾರೆ..
ಹಾಗಾಗಿ ಇಡೀ ಊರಿಗೆ ಬಾಡೂಟ ಹಾಕಿಸಿದ್ದ. ಹೀಗೆ ಬಾಡೂಟ ಹಾಕಿಸಿ ಮದುವೆ ತಯಾರಿಯಲ್ಲಿದ್ದ ಮುದ್ದುರಂಗಪ್ಪ ಮರುವ ದಿನವೇ ನಾಪತ್ತೆಯಾಗಿದ್ದ. ಎಷ್ಟೇ ಹುಡುಕಿದರೂ ಪತ್ತೆಯಾಗಿಲ್ಲ. ಹೀಗಾಗಿ ಮಾನ್ವಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಾಗಿತ್ತು.
For More Updates Join our WhatsApp Group :




