ಉಡುಪಿ: ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್(23) ಮತ್ತು ಪವಿತ್ರಾ(17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.
ಬೇರೊಂದು ಮನೆಯಲ್ಲಿ ಕೆಲಸ ಮಾಡಿ , ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದುತ್ತಿದ್ದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ತನ್ನ ತಾಯಿ ಮತ್ತು ಪವಿತ್ರಾ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ. ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.
ಪ್ರೇಮ ವೈಫಲ್ಯ: ಯುವಕ ಆತ್ಮಹತ್ಯೆ
ಪ್ರೇಯಸಿ ಜೊತೆಗಿರುವ ಖಾಸಗಿ ವಿಡಿಯೋ ಇಟ್ಟುಕೊಂಡು ಗೆಳೆಯರು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ನಲ್ಲಿ ನಡೆದಿದೆ. ಮೃತ ಯುವಕನನ್ನು ನಿಟ್ಟೆಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ನೋಟ್ ಬರೆದಿರುವ ಅಭಿಷೇಕ್, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಿನ್ನಲೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ತಿಳಿಸಿದ್ದಾರೆ. ಆದರೆ ಘಟನೆ ಬಗ್ಗೆ ಕಾರ್ಕಳ ಪೊಲೀಸರು ತನಿಖೆ ನಡೆಸಿದ್ದು, ಪ್ರೇಮ ವೈಫಲ್ಯದಿಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ತಿಳಿಸಿದ್ದಾರೆ. ಅಭಿಷೇಕ್ ಪ್ರೀತಿಸಿದ ಯುವತಿಗೆ ಮದುವೆಯಾಗಿದ್ದು, ಆತ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಆತನ ಆರೋಪ ಸುಳ್ಳು ಎಂದು ಹೇಳಿದ್ದಾರೆ.
For More Updates Join our WhatsApp Group :

