ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಭಾರತ ಸ್ಟ್ಯಾಂಡ್-ಇನ್ ನಾಯಕ ಜಸ್ಪ್ರೀತ್ ಬುಮ್ರಾ ಅತ್ಯುತ್ತಮ ಪ್ರದರ್ಶನ ನೀಡಿದರು. ಮೊದಲ ಇನ್ನಿಂಗ್ಸ್ನಲ್ಲಿ ಮೊದಲ ದಿನದಾಟದ ಅಂತ್ಯಕ್ಕೆ 10 ಓವರ್ ಬೌಲ್ ಮಾಡಿ 17 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು. ನಾಥನ್ ಮೆಕ್ಸ್ವೀ, ಸ್ಟೀವ್ ಸ್ಮಿತ್ ಮತ್ತು ಉಸ್ಮಾನ್ ಖವಾಜಾ ಅವರೊಂದಿಗೆ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ವಿಕೆಟ್ ಉರುಳಿಸಿದರು. ಬ್ಯಾಟಿಂಗ್ನಲ್ಲಿ ಕಡಿಮೆ ಮೊತ್ತಕ್ಕೆ ಭಾರತ ಕುಸಿದಿದ್ದರು ಬುಮ್ರಾ ತಮ್ಮ ಸೆನ್ಸೇಷನಲ್ ಬೌಲಿಂಗ್ನಿಂದ ಪಂದ್ಯದ ಮೇಲೆ ಹಿಡಿತ ಸಾಧಿಸುವಂತೆ ಮಾಡಿದರು.
ತಮ್ಮ ಅದ್ಭುತ ಬೌಲಿಂಗ್ ಮೂಲಕ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಿದ ಜಸ್ಪ್ರೀತ್ ಬುಮ್ರಾಗೆ ಪ್ರಶಂಸೆಗಳ ಸುರಿಮಳೆಯಾಗುತ್ತಿದೆ. ಕಾಮೆಂಟೇಟರ್ಗಳು, ಅಭಿಮಾನಿಗಳು ಮತ್ತು ಮಾಜಿ ಕ್ರಿಕೆಟಿಗರು ಅವರನ್ನು ಗುಣಗಾನ ಮಾಡುತ್ತಿದ್ದಾರೆ. ಏತನ್ಮಧ್ಯೆ, ಬುಮ್ರಾ ಅವರನ್ನು ಅವರ ಪತ್ನಿ, ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಪ್ರಶಂಸೆಯ ಸುರಿಮಳೆಗೈದರು. ತನ್ನ ಪತಿ ಉತ್ತಮ ಬೌಲರ್ ಎಂದು ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಿಳಿಸಿದ್ದಾರೆ. ‘ಬುಮ್ರಾ ಗ್ರೇಟ್ ಬೌಲರ್, ಜೊತೆಗೆ ಗ್ರೇಟರ್ ಬೂಟಿ’ ಎಂದು ಸಂಜನಾ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಇದರರ್ಥ ಬುಮ್ರಾ ಒಬ್ಬ ಶ್ರೇಷ್ಠ ಬೌಲರ್ ಮತ್ತು ಶ್ರೇಷ್ಠ ಪೃಷ್ಠ ಎಂದು ತಮಾಷೆಯಾಗಿ ಪೋಸ್ಟ್ ಮಾಡಿದ್ದಾರೆ. ಬುಮ್ರಾ ಅವರ ಪೃಷ್ಠವನ್ನು ಹೈಲೈಟ್ ಮಾಡಿರುವುದು ಗಮನಾರ್ಹವಾಗಿದೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ನಗುವುದರ ಜೊತೆಗೆ ಕಾಮೆಂಟ್ಗಳನ್ನು ಮಾಡುತ್ತಿದ್ದಾರೆ. ಕೆಲವರು ಸ್ವಲ್ಪ ನಿಮ್ಮ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಿ ಎಂದಿದ್ದಾರೆ.