ಉತ್ತರ ಕರ್ನಾಟಕದಲ್ಲಿ ಬಸ್ ಅಪ*ತ: 22ಕ್ಕೂ ಹೆಚ್ಚು ಗಾಯ

ಉತ್ತರ ಕರ್ನಾಟಕದಲ್ಲಿ ಬಸ್ ಅಪ*ತ: 22ಕ್ಕೂ ಹೆಚ್ಚು ಗಾಯ

ಓವರ್ಟೇಕ್ ವೇಳೆ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿ*.

ಉತ್ತರಕನ್ನಡ: ರಾಜ್ಯದ ವಿವಿಧೆಡೆ ಸಂಭವಿಸಿದ ಬಸ್​​ ಅಪಘಾತದಲ್ಲಿ ಒಟ್ಟು 22 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡದಲ್ಲಿ ಮರಕ್ಕೆ ಬಸ್​​ ಡಿಕ್ಕಿಯಾಗಿ 20 ಜನ ಗಾಯಗೊಂಡಿದ್ದರೆ, ಸೈಕಲ್​​ನಲ್ಲಿ ತೆರಳುತ್ತಿದ್ದ ವೇಳೆ ಬಸ್​​ ಗುದ್ದಿದ ಪರಿಣಾಮ ಕಲಬುರಗಿಯಲ್ಲಿ ವಿದ್ಯಾರ್ಥಿಯ ಕೈ ಸಂಪೂರ್ಣ ಛಿದ್ರವಾಗಿದೆ. ಬಸ್​​ ಡಿಕ್ಕಿಯಾಗಿ ಹಾವೇರಿಯಲ್ಲೂ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.

ಓವರ್‌ಟೇಕ್ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್​ ಗುದ್ದಿದ ಪರಿಣಾಮ 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಾನಸಗೇರಿ ಗ್ರಾಮದ ಮೊರಾರ್ಜಿ ಹಾಸ್ಟೆಲ್ ಬಳಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್ ಚಾಲಕ, 8 ವಿದ್ಯಾರ್ಥಿನಿಯರು, ಇಬ್ಬರು ಶಾಲಾ ಮಕ್ಕಳು, ಇಬ್ಬರು ಮಹಿಳೆಯರು ಮತ್ತು ನಿರ್ವಾಹಕ ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಓವರ್‌ಟೇಕ್ ಮಾಡುವ ಸಂದರ್ಭ ಮುಂದಿನಿಂದ ಕಾರು ಬಂದ ಹಿನ್ನೆಲೆ ಅಪಘಾತ ತಪ್ಪಿಸಲು ಚಾಲಕ ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್​​ ಮರಕ್ಕೆ ಹೋಗಿ ಗುದ್ದಿದೆ. ಗಾಯಾಳುಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ವಿದ್ಯಾರ್ಥಿ ಬಲಗೈ ಛಿದ್ರ

ಸೈಕಲ್​​ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗೆ ಕೆಕೆಆರ್​ಟಿಸಿ ಬಸ್​ ಡಿಕ್ಕಿಯಾಗಿರುವ ಘಟನೆ ಕಲಬುರಗಿಯ ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿ ಇರ್ಫಾನ್ ದವಲಸಾಬ್(15)ಗೆ ಗಂಭೀರ ಗಾಯಗೊಂಡಿದ್ದು, ವಿದ್ಯಾರ್ಥಿ ಅಬ್ದುಲ್ ಕಲಾಂ ಆಜಾದ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *