ಬೆಂಗಳೂರು: ಯಾತ್ರಾರ್ಥಿಗಳು ಹೆಚ್ಚು ಭೇಟಿ ನೀಡುವ ಸ್ಥಳ ಪುರಿ ಜಗನ್ನಾಥ ವಾಗಿದ್ದು ಈಗ ಅಲ್ಲಿಗೆ ಬೆಂಗಳೂರಿನಿಂದ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆಯನ್ನು ಮಾಡಲು ಸಾರಿಗೆ ಇಲಾಖೆ ಮುಂದಾಗಿದೆ. ಇದಕ್ಕಾಗಿ ಐಷಾರಾಮಿ ಅಂಬಾರಿ ಉತ್ಸವ ಮಾದರಿಯ ಸ್ಲೀಪರ್ ಬಸ್ಗಳನ್ನು ಬಳಕೆ ಮಾಡಲಾಗುತ್ತದೆ.ಸುಮಾರು 1,500 ಕಿ. ಮೀ. ಉದ್ದದ ಬಸ್ ಮಾರ್ಗ ಇದಾಗಿದ್ದು, ಐಷಾರಾಮಿ ಅಂಬಾರಿ ಉತ್ಸವ ಮಾದರಿಯ ಬಸ್ನಲ್ಲಿಯೇ 18 ಗಂಟೆಗಳ ಕಾಲ ಪ್ರಯಾಣ ಮಾಡಬೇಕಿದೆ. ಈ ಪ್ರಯೋಗ ಯಶಸ್ವಿಯಾದರೆ ಗುಜರಾತ್ ರಾಜ್ಯದ ಕೆಲವು ನಗರಗಳಿಗೆ ಸಹ ಬಸ್ ಸಂಪರ್ಕವನ್ನು ಕಲ್ಪಿಸಲು ಕೆಎಸ್ಆರ್ಟಿಸಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಟಿಕೆಟ್ ದರ ಎಷ್ಟು ಎಂದು ಇನ್ನೂ ನಿಗದಿಪಡಿಸಲಾಗಿಲ್ಲ ನಿಗಮವು ಚಿಂತನೆ ನಡೆಸಿ ಎಲ್ಲಾ ಓಕೆ ಆದ ಬಳಿಕ ಮತ್ತಷ್ಟು ಮಾಹಿತಿಯನ್ನು ನೀಡಲಿದೆ.
ಬೆಂಗಳೂರಿನಿಂದ ಪುರಿ ಜಗನ್ನಾಥ ಗೆ ಬಸ್ ವ್ಯವಸ್ಥೆ!
