ಬೆಂಗಳೂರು: ಇಂಧನ ದರ ಏರಿಕೆ ಬೆನ್ನಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತದೆ ಎಂದ ಹೇಳಲಾಗುತ್ತಿತ್ತು. ಆದರೆ ಇದೀಗ ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ. ಇಲಾಖೆಯೊಂದಿಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲು ತೈಲ ಬೆಲೆ ಏರಿಕೆ ಮಾಡಿಲ್ಲ. ಬದಲಿಗೆ, ಆರ್ಥಿಕ ಮೂಲಗಳಾದ ಮದ್ಯ ಮತ್ತು ತೈಲದಿಂದ ಹೆಚ್ಚಿನ ಆದಾಯ ಬಂದರೆ, ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಅಂತ ತೈಲ ಬೆಲೆ ಏರಿಕೆ ಮಾಡಿದ್ದೇವೆ ಎಂದು ಹೇಳಿದರು
ಇದನ್ನು ಓದಿ : ಕರ್ನಾಟಕಕ್ಕೆ ಅನ್ಯಾಯ- ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ದರಾಮಯ್ಯ ಸವಾಲು