ಇಂದಿನಿಂದ ಆ.30ರ ವರೆಗೆ JC ರಸ್ತೆಯಲ್ಲಿ ಬಸ್​ ಸಂಚಾರ ನಿರ್ಬಂಧ!

ಇಂದಿನಿಂದ ಆ.30ರ ವರೆಗೆ JC ರಸ್ತೆಯಲ್ಲಿ ಬಸ್​ ಸಂಚಾರ ನಿರ್ಬಂಧ!

ಬೆಂಗಳೂರು: ಸಿಲಿಕಾನ್​ ಸಿಟಿಯ ಹೃದಯ ಭಾಗದಲ್ಲಿರುವ ಜೆ.ಸಿ ರಸ್ತೆಯಲ್ಲಿ ಕಳೆದ ಕೆಲ ತಿಂಗಳಿನಿಂದ ರಸ್ತೆ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ನಿತ್ಯ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ. ಇದೀಗ ಜೆ.ಸಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಇಂದಿನಿಂದ (ಆ. 25) ಆಗಸ್ಟ್​ 30ರ ವರೆಗೆ ಈ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು ಸೇರಿದಂತೆ ಬಸ್​ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಈ ಕುರಿತಾಗಿ ಬೆಂಗಳೂರು ಪಶ್ಚಿಮ ವಲಯ ಸಂಚಾರಿ ಪೊಲೀಸರು ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.  ವೈಟ್ ಟಾಪಿಂಗ್ ಕಾಮಗಾರಿ ಹಿನ್ನಲೆ ಜೆ.ಸಿ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು ಸೇರಿದಂತೆ ಬಸ್​ ಸಂಚಾರಕ್ಕೆ ನಿರ್ಬಂಧ ಹೇರಿದ್ದು, ಜೊತೆಗೆ ಪರ್ಯಾಯ ಮಾರ್ಗಗಳನ್ನು ತಿಳಿಸಲಾಗಿದೆ.

ಯಾವೆಲ್ಲಾ ವಾಹನ ಸಂಚಾರ ನಿರ್ಬಂಧ 

  • ಜೆಸಿ ರಸ್ತೆ, ಮಿನರ್ವಾ ಸರ್ಕಲ್​ ಕಡೆಗೆ ಭಾರಿ ಗಾತ್ರದ ವಾಹನಗಳು ಸೇರಿದಂತೆ ಬಸ್‌ಗಳಿಗೆ ಅವಕಾಶವಿಲ್ಲ.

ಪರ್ಯಾಯ ಮಾರ್ಗಗಳು ಹೀಗಿವೆ

  • ರಾಮ ಕೃಷ್ಣ ಆಶ್ರಮ, ಬುಲ್ ಟೆಂಪಲ್ ರಸ್ತೆ, ಚಾಮರಾಜ ಪೇಟೆ, ಗೂಡ್ ಶೆಡ್ ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್​​ ಕಡೆಗೆ ಸಂಚರಿಸುವುದು.
  • ಕಲಾಸಿಪಾಳ್ಯ ಬಸ್​ ನಿಲ್ದಾಣದಿಂದ ಕೆ ಆರ್ ರಸ್ತೆ, ಲಾಲ್ ಬಾಗ್ ವೆಸ್ಟ್ ಗೇಟ್, ಅಶೋಕ ಪಿಲ್ಲ,ರ್ ಸಿದ್ಧಾರ ರಸ್ತೆ ಮಾರ್ಗವಾಗಿ ಹೊಸೂರು ರಸ್ತೆ ಸೇರುವುದು.
  • ಹೊಸೂರು ರಸ್ತೆಯಿಂದ ಡಬಲ್ ರಸ್ತೆ ರಿಚ್ಮಂಡ್​ ಸರ್ಕಲ್, ಹಡ್ನನ್ ಸರ್ಕಲ್, ಕೆ.ಜಿ. ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್​​ ಕಡೆಗೆ ಸಂಚರಿಸಬಹುದು.

ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಜೆ.ಸಿ ರಸ್ತೆಯಲ್ಲಿ ಅತಿಹೆಚ್ಚು ವಾಹನಗಳ ಸಂಚಾರದಿಂದಾಗಿ ಕಾಮಗಾರಿಯಲ್ಲಿ ವಿಳಂಬವಾಗುತ್ತಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಸದ್ಯ ರಸ್ತೆಯ ಅವ್ಯವಸ್ಥೆಯಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಆಮೆಗತಿಯ ಈ ಕಾಮಗಾರಿಯನ್ನು ವೇಗವಾಗಿ ಮಾಡುವಂತೆ ಬಿಬಿಎಂಪಿಗೆ ಜನರು ಒತ್ತಾಯಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *