ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ, ಎಷ್ಟು ದಪ್ಪವಿದ್ದರೂ ತೆಳ್ಳ ಆಗಬಹುದು.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ, ಎಷ್ಟು ದಪ್ಪವಿದ್ದರೂ ತೆಳ್ಳ ಆಗಬಹುದು.

ಅಂಜೂರದ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ? ಇವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ತಜ್ಞರು ಹೇಳುವ ಪ್ರಕಾರ ಇವುಗಳನ್ನು ಸರಿಯಾದ ರೀತಿಯಲ್ಲಿ ಸೇವಿಸಿದಾಗ ಮಾತ್ರ ಅವುಗಳಲ್ಲಿರುವ ಆರೋಗ್ಯ ಪ್ರಯೋಜನಗಳು ಸಿಗುತ್ತದೆ. ಈ ಅಂಜೂರವು ಆರೋಗ್ಯಕ್ಕೆ ತುಂಬಾ ಒಳ್ಳೆಯದಾದರೂ ಅವುಗಳನ್ನು ಯಾವ ರೀತಿಯಲ್ಲಿ ಸೇವನೆ ಮಾಡಬೇಕು ಎಂಬುದು ಎಲ್ಲರಿಗೂ ತಿಳಿದಿರುವುದಿಲ್ಲ. ಆದರೆ ಇವುಗಳನ್ನು ಯಾವ ಸಮಯದಲ್ಲಿ ಸೇವನೆ ಮಾಡುತ್ತೇವೆ ಎಂಬುದರ ಮೇಲೆ ಇವುಗಳಿಂದ ಸಿಗುವ ಪ್ರಯೋಜನಗಳು ಅವಲಂಬಿತವಾಗಿರುತ್ತದೆ ಎಂಬುದನ್ನು ನಾವು ಮರೆಯಬಾರದು. ಹಾಗಾದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಂಜೂರ ಸೇವನೆ ಮಾಡಬಹುದೇ? ಯಾವ ಸಮಯದಲ್ಲಿ ಸೇವನೆ ಮಾಡುವುದರಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ತಿಳಿದುಕೊಳ್ಳಿ.

ಅಂಜೂರವನ್ನು ಯಾವಾಗ ಸೇವನೆ ಮಾಡಬೇಕು?

ಊಟದ ನಂತರ ನಿಮ್ಮ ಫೈಬರ್ ಸೇವನೆಯ ಭಾಗವಾಗಿ ನೀವು ಒಂದು ಅಥವಾ ಎರಡು ಅಂಜೂರವನ್ನು ತಿನ್ನಬಹುದು. ಇದು ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರತಿದಿನ, ಈ ಅಭ್ಯಾಸವನ್ನು ತಪ್ಪದೆ ರೂಢಿಸಿಕೊಂಡರೆ ಕಿಣ್ವಗಳು ಬಿಡುಗಡೆಯಾಗುತ್ತವೆ ಮತ್ತು ಜೀರ್ಣಕ್ರಿಯೆಯ ಸಮಸ್ಯೆಗಳು ದೂರವಾಗುತ್ತವೆ. ಇದಕ್ಕಿಂತ ಹೆಚ್ಚಿನ ಪ್ರಯೋಜನಗಳು ಬೇಕಾದರೆ, ಎರಡು ಅಥವಾ ಮೂರು ಅಂಜೂರವನ್ನು ಅರ್ಧ ಕಪ್ ನೀರಿನಲ್ಲಿ ರಾತ್ರಿಯಿಡೀ ನೆನೆಸಿಡಿ. ಬೆಳಿಗ್ಗೆ ಎದ್ದು ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಅಂಜೂರ ಸೇವನೆ ಮಾಡಿ. ಇವುಗಳನ್ನು ನಿಯಮಿತವಾಗಿ ಮಾಡಿದರೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಮಾತ್ರವಲ್ಲ ನಿಮ್ಮ ತೂಕ ಕೂಡ ಕಡಿಮೆಯಾಗುತ್ತದೆ.

Leave a Reply

Your email address will not be published. Required fields are marked *