ಆರ್ ಅಶೋಕ್ ಬೆನ್ನಲ್ಲೇ ದೆಹಲಿಗೆ ತೆರಳಿದ BY Vijayendra : BJPಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ.

ಆರ್ ಅಶೋಕ್ ಬೆನ್ನಲ್ಲೇ ದೆಹಲಿಗೆ ತೆರಳಿದ BY Vijayendra : ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ.

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ಹೋದ ಬಳಿಕಕರ್ನಾಟಕ ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆಗಳು ಬಿರುಸುಗೊಂಡಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿ ದಿನ ಬೆಂಗಳೂರಿನಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ಭೇಟಿ ನೀಡಲು ಆರಂಭಿಸಿದ್ದರೆ, ಅತ್ತ ಭಿನ್ನರ ಬಣ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರರನ್ನು ತೆರವುಗೊಳಿಸುವುದಕ್ಕೆ ಶತಾಯಗತಾಯ ಯತ್ನಿಸುತ್ತಿದೆ. ಇದೇ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿವೈ ವಿಜಯೇಂದ್ರ ಪ್ರತ್ಯೇಕವಾಗಿ ದೆಹಲಿಗೆ ವರಿಷ್ಠರ ಭೇಟಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಗಮನಾರ್ಹ. ಉಭಯ ನಾಯಕರ ಭೇಟಿಯ ನಿಖರ ಕಾರಣ ಇನ್ನೂ ಸ್ಪಷ್ಟಪಡಿಸಲಾಗಿಲ್ಲ. ಆದರೆ, ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರ ನೇಮಕಾತಿ ಕುರಿತು ಶೀಘ್ರದಲ್ಲೇ ತೀರ್ಮಾನವನ್ನು ಪ್ರಕಟಿಸಬಹುದು ಎಂಬ ನಿರೀಕ್ಷೆ ಇದೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಆರ್ ಅಶೋಕ್ ಅವರ ಆಪ್ತ ಮೂಲಗಳ ಪ್ರಕಾರ, ಅವರು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿಗೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ, ಮತ್ತೊಂದು ಮೂಲಗಳ ಪ್ರಕಾರ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಈ ಮಾಹಿತಿಯನ್ನು ಇನ್ನೂ ಅಧಿಕೃತವಾಗಿ ಖಚಿತಪಡಿಸಲಾಗಿಲ್ಲ. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೂ ಅಶೋಕ್ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

Leave a Reply

Your email address will not be published. Required fields are marked *