ಸಚಿವ ಸಂಪುಟ ಸಭೆ || ಕೋವಿಡ್ ಅಕ್ರಮ ವರದಿ ಅಧ್ಯನಕ್ಕೆ ತಂಡ ರಚನೆಗೆ ತೀರ್ಮಾನ : ಸಭೆಯ ಇತರೆ ತೀರ್ಮಾನಗಳ ಬಗ್ಗೆ ತಿಳಿಯಿರಿ
ಬೆಂಗಳೂರು: ಕೋವಿಡ್ ಅಕ್ರಮ ಬಗ್ಗೆ ನ್ಯಾ. ಡಿ ಕುನ್ಹಾ ನೀಡಿರುವ ವರದಿಯನ್ನು ಅಧ್ಯಯನ ಮಾಡಿ, ಆದಷ್ಟು ಬೇಗ ಸಚಿವ ಸಂಪುಟಕ್ಕೆ ವರದಿ ಮಂಡಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ತಂಡ ರಚಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೋವಿಡ್ ಅಕ್ರಮ ಸಂಬಂಧ ನ್ಯಾ. ಡಿ ಕುನ್ಹಾ ವರದಿ ಬಗ್ಗೆ ವ್ಯಾಪಕ ಚರ್ಚೆ ನಡೆಸಲಾಯಿತು. ಕುನ್ಹಾ ವರದಿಯಲ್ಲಿ ಕೋವಿಡ್ ನಲ್ಲಿ ನೂರಾರು ಕೋಟಿ ಅಕ್ರಮ ಆಗಿರುವ ಬಗ್ಗೆ ಕೆಲ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವರದಿಯಲ್ಲಿ ಕಡತ ಮಿಸ್ಸಿಂಗ್ ಆಗಿರುವ ಬಗ್ಗೆನೂ ಪ್ರಸ್ತಾಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ, ಹಣಕಾಸು ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡಕ್ಕೆ ಪರಿಶೀಲಿಸಿ ಒಂದು ತಿಂಗಳ ಒಳಗೆ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದರು.
ಮಹದಾಯಿ ಬಗ್ಗೆ ಪ್ರಧಾನಿ ಬಳಿ ನಿಯೋಗ ಕೊಂಡೊಯ್ಯಲು ತೀರ್ಮಾನ: ಮಹದಾಯಿ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಬರುವ ನಿರೀಕ್ಷೆ ಇತ್ತು. ಆದರೆ ವನ್ಯಜೀವಿ ಮಂಡಳಿ ತನ್ನ 79ನೇ ಸಭೆಯಲ್ಲಿ ವಿಷಯವನ್ನು ಮುಂದೂಡಿದೆ. ಆ ಮೂಲಕ ನಮಗೆ ನಿರಾಶೆಯಾಗಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಆದರೆ ಗೋವಾ-ತಮ್ನೂರು 400 ಕೆ.ವಿ. ವಿದ್ಯುತ್ ಮಾರ್ಗ ಯೋಜನೆಗೆ ಮಂಡಳಿ ಒಪ್ಪಿಗೆ ನೀಡಿದೆ. ಆದರೆ ಮಹದಾಯಿ ಪ್ರಸ್ತಾವನೆಯನ್ನು ಮುಂದೂಡಿದೆ. 400 ಕೆ.ವಿ. ವಿದ್ಯುತ್ ಮಾರ್ಗಕ್ಕಾಗಿ 435 ಎಕರೆ ಅರಣ್ಯ ಭೂಮಿ ಬಳಕೆಯಾಗುತ್ತದೆ. ಆದರೂ ಸಮ್ಮತಿ ನೀಡಲಾಗಿದೆ. ಸಂಪುಟ ಸಭೆ ಈ ಬಗ್ಗೆ ಗಂಭೀರವಾಗಿ ಚರ್ಚಿಸಿ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಸರ್ವ ಪಕ್ಷ ಸಭೆ ನಡೆಸಿ, ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕರೆದೊಯ್ಯಲು ತೀರ್ಮಾನಿಸಲಾಗಿದೆ ಹಾಗು ಕಾನೂನು ತಜ್ಞರ ಬಳಿ ಚರ್ಚಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ಪರಿಶೀಲನೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.
ಮಸೂದೆ ರಾಜ್ಯಪಾಲರಿಗೆ ಕಳುಹಿಸಲು ತೀರ್ಮಾನ: “ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ ಸಂಖ್ಯೆ 26, 2024″ನ್ನು ಮುಂಬರುವ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಹಿಂಪಡೆಯಲು ಮತ್ತು ವಿಧಾನಸಭೆಯ ವಿಧೇಯಕ 27ಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಂಬಂಧ ಬಿಲ್ ನ್ನು ರಾಜ್ಯಪಾಲರು ವಾಪಸು ಕಳಹಿಸಿದ್ದರು. ಅವರು ತಮ್ಮ ಆಕ್ಷೇಪಣೆಯಲ್ಲಿ ಈ ಸಂಬಂಧ ಈಗಾಗಲೇ ಮಸೂದೆ ಇದ್ದರೂ, ಮತ್ತೊಂದು ಮಸೂದೆ ಅಗತ್ಯತೆಯ ಬಗ್ಗೆ ಸ್ಪಷ್ಟೀಕರಣ ಕೇಳಿದ್ದರು. ಅದರ ಆಧಾರದಲ್ಲಿ ಹಿಂದಿನ ಮಸೂದೆಯನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ. ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ, 2024ವನ್ನು ರಾಜ್ಯಪಾಲರಿಗೆ ಕಳುಹಿಸಲು ತೀರ್ಮಾನಿಸಲಾಗಿದೆ ಎಂದರು.
ನ್ಯಾಯಾಂಗ ನಿಂದನೆ ಆಗಿಲ್ಲ: ಸಿಎಂ ನೇತೃತ್ಬದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆ ಮಾಡಲಾಗಿತ್ತು. ಅದರ ಬಗ್ಗೆ ಪ್ರಮೋದಾ ದೇವಿ ಒಡೆಯರ್ ಹೇಳಿಕೆ ನೀಡಿದ್ದಾರೆ. ಕೋರ್ಟ್ ನಲ್ಲಿ ಈ ಬಗ್ಗೆ ತಡೆಯಾಜ್ಞೆ ಇದ್ದರೂ ಸಿಎಂ ಅವರು ಸಭೆ ಮಾಡಿರುವುದು ನ್ಯಾಯಂಗ ನಿಂದನೆ ಎಂದು ಅವರು ಆರೋಪಿಸಿದ್ದರು. ಆದರೆ ಪ್ರಮೋದಾ ದೇವಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ. ಯಾವುದೇ ನ್ಯಾಯಾಂಗ ನಿಂದನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ಸಂಪುಟ ಸಭೆಯ ಇತರ ತೀರ್ಮಾನಗಳು:
- ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿ, ನವೀಕರಣ, ತಿದ್ದುಪಡಿ ಮತ್ತಿತರ ಸೇವೆಗಳಿಗಾಗಿ ಬಳಕೆದಾರರಿಂದ ಸಂಗ್ರಹಿಸಲಾಗುತ್ತಿರುವ ಶುಲ್ಕ, ದಂಡ ಮುಂತಾದ ದರಗಳ ಪರಿಷ್ಕರಣೆಗೆ ಅನುಮೋದನೆ. ಶುಲ್ಕ,ದಂಡ, ಮುಂತಾದ ದರಗಳನ್ನು ಶೇ.35 ಹೆಚ್ಚಿಸಲು ತೀರ್ಮಾನ.
- ಕರ್ನಾಟಕ ನ್ಯಾಯಾಂಗ ಸೇವಾ (ನೇಮಕಾತಿ) (ತಿದ್ದುಪಡಿ) ನಿಯಮಗಳಿಗೆ ಅನುಮೋದನೆ.
- ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ (KIMS) ರೇಡಿಯೋಥೆರಪಿ ಚಿಕಿತ್ಸಾ ಮತ್ತು ರೋಗನಿರ್ಧಾರಕ ಉಪಕರಣಗಳನ್ನು ರೂ. 70 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ
- ಮೈಸೂರಿನ 40 ಹಾಸಿಗೆ ಸಾಮರ್ಥ್ಯದ ನೆಪ್ರೋ-ಯುರಾಲಜಿ ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 117.11 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಕೋಟಿಗಳ ಅನುಮೋದನೆ ನೀಡಲು ಆಡಳಿತಾತ್ಮಕ ಅನುಮೋದನೆ
- ಕಲಬುರಗಿಯಲ್ಲಿ 150 ಹಾಸಿಗೆ ಮಕ್ಕಳ ಆರೋಗ್ಯ ಇಂದಿತಾಗಾಂಧಿ ಮಕ್ಕಳ ಸಾಮರ್ಥ್ಯದ ಘಟಕವನ್ನು ಆರೋಗ್ಯ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ರೂ. 221.51 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ
- ಬೆಂಗಳೂರಿನ ನೆಫ್ರೊ-ಯುರಾಲಜಿ ಸಂಸ್ಥೆಯ ಹೊರರೋಗಿ ವಿಭಾಗಕ್ಕೆ ನೂತನ ಕಟ್ಟಡವನ್ನು ರೂ. 16.15 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ
- ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ-4 (2024-29) ಕ್ಕೆ ಅನುಮೋದನೆ.
- ರಾಜ್ಯದ ವಿವಿಧ ಕಾರಾಗೃಹಗ ಳಲ್ಲಿರುವ ಕೇಂದ್ರ 59 ಜೀವಾವಧಿ ಶಿಕ್ಷಾಬಂದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಒಪ್ಪಿಗೆ
- ಗದಗ ಜಿಲ್ಲೆಯ ಗದಗ ಬೆಟಗೇರಿಯಲ್ಲಿ ಕರ್ನಾಟಕ ಗೃಹ ಮಂಡಳಿಯ ವಸತಿ ಬಡಾವಣೆಯಲ್ಲಿನ 1 ಎಕರೆ 27 ಗುಂಟೆ ಜಮೀನಿನಲ್ಲಿ 2 ಬಿ.ಹೆಚ್.ಕೆ (2+3) ಮಾದರಿಯ ಬಹುಮಹಡಿ ಗುಂಪು ವಸತಿ ಯೋಜನೆಯ 239.55 ಕೋಟಿಗಳ ಪರಿಷ್ಕೃತ ಯೋಜನಾ ಅನುಮೋದನೆ
- ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸೇವೆಗೆ ಸೇರಿದ ಕೇಂದ್ರಸ್ಥಾನ ಸಹಾಯಕರು/ ಹಿರಿಯ ಉಪ ನೋಂದಣಾಧಿಕಾರಿ/ ಉಪ ನೋಂದಣಾಧಿಕಾರಿಗಳನ್ನು Guided Counselling based compulsory transfers/ counselling transfers ಮೂಲಕ ವರ್ಗಾವಣೆ ಮಾಡಲು ನಿಗದಿಪಡಿಸಿದ ಅವಧಿಯನ್ನು 10.08.2024 ರಿಂದ 30.10.2024 ರವರೆಗೆ ವಿಸ್ತರಿಸಲು ಅನುಮೋದನೆ.
- ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ 1 ಲಕ್ಷ ಮಹಿಳೆಯರಿಗೆ ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡುವುದರ ಜೊತೆಯಲ್ಲಿ 2500 ಕಾಫಿ ಕಿಯೋಸ್ಕ್ ಗಳನ್ನು 25 ಕೋಟಿಗಳ ವೆಚ್ಚದಲ್ಲಿ ಪ್ರಾರಂಭಿಸಲು ಹಾಗೂ ಸ್ವ-ಸಹಾಯ ಗುಂಪುಗಳ ಮಹಿಳೆಯರ ಮೂಲಕ ನಿರ್ವಹಿಸಲು ಆಡಳಿತಾತ್ಮಕ ಅನುಮೋದನೆ.
- ಅರ್ಹತಾ ಪತ್ರ ನವೀಕರಣಕ್ಕೆ ಬರುವ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು ರಾಜ್ಯದ 32 ಸ್ಥಳಗಳಲ್ಲಿ ಸ್ವಯಂಚಾಲಿತ ವಾಹನಗಳ ಪರೀಕ್ಷಾ ಕೇಂದ್ರಗಳನ್ನು (ATS) ರೂ. 341 ಕೋಟಿಗಳ ಒಟ್ಟು ಅಂದಾಜು ಮೊತ್ತದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿ, 5.3.2024ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ.
- ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ 2022 ಅನುಷ್ಠಾನಗೊಳಿಸಲು 15 ವರ್ಷಗಳನ್ನು ಪೊರೈಸಿರುವ ವಾಹನಗಳನ್ನು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಗೊಳಿಸಲು ಉದ್ದೇಶಿಸಿರುವ ವಾಹನಗಳ ಮೇಲೆ ಕೊನೆಯ 01 ವರ್ಷದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿನ ಬಾಕಿ ದಂಡಗಳ ವಸೂಲಿಯಿಂದ ವಿನಾಯಿತಿ ನೀಡಿರುವ ಅವಧಿಯನ್ನು 31.03.2026 ರವರೆಗೆ ವಿಸ್ತರಿಸಲು ಅನುನೋದನೆ.
- ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವಳಿ ಪಾರ್ಕ್ ಅನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP)ದಲ್ಲಿ ರೂ.27.97 ಕೋಟಿಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ.
- ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಸ್ಥಳೀಯ ಉದ್ಯೋಗಿಗಳನ್ನು ಕೌಶಲ್ಯಗೊಳಿಸಲು “ನಿಪುಣ್ ಕರ್ನಾಟಕ” ಉಪಕ್ರಮವನ್ನು ರೂ. 100 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಹಾಗೂ ಪ್ರಸ್ತುತ 2024-25ನೇ ಸಾಲಿನಲ್ಲಿ ರೂ. 10 ಕೋಟಿಗಳ ಮೊತ್ತದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ.
- ಬೆಳಗಾವಿ ಜಿಲ್ಲೆ, ಬೈಲಹೊಂಗಲ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 08 ಏತ ನೀರಾವರಿ ಯೋಜನೆಗಳ ಪುನ:ಶ್ವೇತನ ಕಾಮಗಾರಿಗಳ ರೂ. 149.70 ಕೋಟಿಗಳ ಮೊತ್ತದ ವಿವರವಾದ ಯೋಜನಾ ವರದಿಗೆ ಅನುಮೋದನೆ.
- ಕಲಬುರಗಿ ಜಂಟಿ ಸಾರಿಗೆ ಆಯುಕ್ತರು ಹಾಗೂ ಉಪ ಸಾರಿಗೆ ಆಯುಕರು ಮತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗೆ ಸ್ವಂತ ಕಟ್ಟಡ ನಿರ್ಮಾಣದ ಮತ್ತು ಒಳಾಂಗಣ ಕಾಮಗಾರಿಗಳ ರೂ. 10.50 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
- ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರವು ಹೊಸಪೇಟೆ ತಾಲ್ಲೂಕು ಇಂಗಳಗಿ ಗ್ರಾಮದ ವಿವಿಧ ಸರ್ವೆ ನಂಬರ್ಗಳಲ್ಲಿನ ಒಟ್ಟು 24.24 ಎಕರೆ ಜಮೀನಿನಲ್ಲಿ ಶೇಕಡಾ ಅನುಪಾತದಲ್ಲಿ ಉದ್ದೇಶಿಸಿರುವ 50:50 ವಸತಿ ಯೋಜನೆಯ ರೂ. 11.76 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
- ಕೇಂದ್ರ ಪುರಸ್ಕೃತ National Urban Digital Mission (NUDM) ಯೋಜನೆಯನ್ನು ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯ ಮುಖಾಂತರ ಕರ್ನಾಟಕ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರೂ. 37.50 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ
- ಮಹದಾಯಿ ಪ್ರವಾಹ ಪ್ರಾಧಿಕಾರದ ನಿಧಿಗೆ (Progressive River Authority for Welfare and Harmony)ಗೆ ಮೊದಲ ಹಂತದಲ್ಲಿ ರಾಜ್ಯದ ಪಾಲಿನ ರೂ. 1.67 ಕೋಟಿಗಳನ್ನು KNNL ನಿಂದ ಪಾವತಿಸಲು ತೀರ್ಮಾನ.
- ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ 450 ಹಾಸಿಗೆಗಳ ಆಸ್ಪತ್ರೆ ಮತ್ತು ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ರೂ. 198.27 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
- ಶ್ರೀ ಜಯದೇವ ಹೃದ್ರೋಗ ವಿಜ್ಞಾನ 2 ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖೆಯ ಕಟ್ಟಡ ಕಾಮಗಾರಿಯ ರೂ. 262.20 ಕೋಟೆಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
- ಬೆಂಗಳೂರು ನವೀಕರಿಸಬಹುದಾದ ಇಂಧನ ನಿಗಮ ನಿಯಮಿತ” ಎಂಬ ನವೀಕರಿಸಬಹುದಾದ ಇಂಧನ ಪಾರ್ಕ್ ಅನ್ನು ನಗರಾಭಿವೃದ್ಧಿ ಇಲಾಖೆಯ ವಿವಿಧ ಅಂಗಸಂಸ್ಥೆಗಳ ಜಂಟಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಅನುಮೋದನೆ
- ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ” ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು 3 ವರ್ಷಗಳಿಗೆ ಹೆಚ್ಚಿಸಲು ಒಂದು ಬಾರಿಯ ಕ್ರಮವಾಗಿ ಒಂದು ವರ್ಷದ ಅವಧಿಗೆ ಸಡಿಲಿಕೆಗೆ ಒಪ್ಪಿ