ಬೆಂಗಳೂರು ಏರ್ಪೋರ್ಟ್ನಲ್ಲಿ 3 ಕೋಟಿ ಮೌಲ್ಯದ ಗಾಂಜಾ ಪತ್ತೆ.

ಬೆಂಗಳೂರು ಏರ್ಪೋರ್ಟ್ನಲ್ಲಿ 3 ಕೋಟಿ ಮೌಲ್ಯದ ಗಾಂಜಾ ಪತ್ತೆ.

ಥಾಯ್ಲೆಂಡ್ ಮತ್ತು ಮಲೇಶಿಯಾ ಮೂಲ ಮೂವರು ಆರೋಪಿಗಳು ವಶಕ್ಕೆ

ಬೆಂಗಳೂರು: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಎಂಟೂ ವರೆ ಕೆಜಿ ಹೈಡ್ರೋ ಗಾಂಜಾ ಪತ್ತೆ

ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದ ವೇಳೆ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಮೂವರನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು!

ಗಾಂಜಾ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದ ಹಿಂದೆ ಇರುವ ಜಾಲ ಹಾಗೂ ವಿದೇಶಿ ಸಂಪರ್ಕಗಳ ಕುರಿತು ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *