ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಅಗ್ನಿ ಅವಘಡ; ಶಾರ್ಟ್ ಸರ್ಕ್ಯೂಟ್ ಶಂಕೆ.
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ (ಮಾ.31) ನಡೆದಿದೆ.
ಕಾರು ಹೆದ್ದಾರಿಯಲ್ಲಿ ವೇ ಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇನ್ನು ಇದನ್ನು ಗಮನಿಸಿದ ಕಾರು ಚಾಲಕ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
For More Updates Join our WhatsApp Group :



