ನೆಲಮಂಗಲ : ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರಸ್ತೆಯ ಹುಲಿಕುಂಟೆ ಟೋಲ್ ಪ್ಲಾಜಾದಲ್ಲಿ ನಡೆದಿದೆ.
ಟೋಲ್ ಪಾವತಿಸುವ ವಿಚಾರಕ್ಕೆ ದಾಬಸ್ ಪೇಟೆ ನಿವಾಸಿ ವೆಂಕಟೇಶ್ ಮೇಲೆ ಹಲ್ಲೆ ಮಾಡಲಾಗಿದೆ. ಶಂಕರ್, ಯಶವಂತ್, ಸುದೀಪ್, ರಾಜು, ಆನಂದ್ ಸೇರಿದಂತೆ 8 ಮಂದಿ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆಂದು ಚಾಲಕ ವೆಂಕಟೇಶ್ ಆರೋಪಿಸಿದ್ದಾರೆ. ಚಿಕ್ಕಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.