ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾಡಿದ್ದಾರೆ.

ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ.
ಜಾತಿಗಣತಿ ವಿಚಾರವಾಗಿ ಯಾರಿಗೂ ತೃಪ್ತಿ ಸಿಕ್ಕಿಲ್ಲ. ತೆರಿಗೆ ಹಣ ಬಳಸಿ ಗಣತಿ ಮಾಡಿದ್ದಾರೆ. ಅದನ್ನು ಬಿಡುಗಡೆ ಮಾಡದೆ ತಮಾಷೆ ಮಾಡಿದ್ದಾರೆ. ಅವರ ಹೈಕಮಾಂಡ್ ಹೇಳಿದೆ ಎಂದು ಕಸದ ಬುಟ್ಟಿಗೆ ಹಾಕಿದ್ರು.
ಈಗ ಮತ್ತೆ ಹಣ ಖರ್ಚು ಮಾಡಿ ಜಾತಿಗಣತಿ ಮಾಡಲು ಹೊರಟಿದ್ದಾರೆ. ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಗಣತಿ ಮಾಡಲು ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರ ಒಳ್ಳೆಯ ಗಣತಿ ಮಾಡುತ್ತದೆ. ಕಾಂಗ್ರೆಸ್ ಕೇಂದ್ರದಲ್ಲಿ ಅವಕಾಶ ಸಿಕ್ಕಾಗ ಗಣತಿ ಮಾಡಿಲ್ಲ. ಕರ್ನಾಟಕದಲ್ಲಿ ಜಾತಿಗಣತಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.