ಬೆಂಗಳೂರು: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದು ಹಿಂಬರಹ ನೀಡಿರುವ ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. ಶ್ರೀಮಂತಿಕೆಯನ್ನು ಸರಳತೆಯಲ್ಲಿ ಬಚ್ಚಿಟ್ಟು, ಸಾಮಾಜಿಕ ಸಮೀಕ್ಷೆಯಿಂದ ಮಾಹಿತಿಯನ್ನು ಮುಚ್ಚಿಡುವ ಮೂಲಕ ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣವಾಗಿದೆ.
ದೀನ ದಲಿತರು, ಹಿಂದುಳಿದವರು ಹಾಗೂ ಬಡ ಜನರನ್ನು ಆರ್ಥಿಕವಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಿ ನ್ಯಾಯ ಕಲ್ಪಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಿಂದ ಮಾತ್ರ ಸಾಧ್ಯ. ತೋರಿಕೆಗೆ, ಪ್ರಚಾರದ ಮೋಹದಿಂದ ಕೂಡಿದ ಸಮಾಜಸೇವೆಯಿಂದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
For More Updates Join our WhatsApp Group :