ಇನ್ಮುಂದೆ ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ CCTV ಕಣ್ಗಾವಲು..!

to keep an eye on things remotely from cctv

ಬೆಂಗಳೂರು: ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ಸಿಸಿಟಿವಿ (CCTV) ಕಣ್ಗಾವಲು ಇರಲಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ CCTV ಅಳವಡಿಕೆಗೆ ಸರ್ಕಾರ ಆದೇಶ ಮಾಡಿದೆ.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು  ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್, ಡ್ರಗ್ಸ್ ಚಟುವಟಿಕೆಗಳು, ಲೈಂಗಿಕ ಕಿರುಕುಳ ಪ್ರಕರಣಗಳು ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಮಾಡಿದೆ.

ಸಿಸಿ ಟಿವಿ ಅಳವಡಿಕೆಗೆ ಕಾರಣ ಏನು?
* ಕಾಲೇಜು, ವಿವಿಗಳಲ್ಲಿ ಇತ್ತೀಚೆಗೆ ರ‍್ಯಾಗಿಂಗ್ ಪ್ರಕರಣಗಳು ಜಾಸ್ತಿ ಆಗುತ್ತಿದೆ. ಇದನ್ನ ನಿಯಂತ್ರಣ ಮಾಡಲು.
* ಕಾಲೇಜುಗಳಲ್ಲಿ ಮತ್ತು ವಿವಿ ಕ್ಯಾಂಪಸ್‌ಗಳಲ್ಲಿ ಡ್ರಗ್ಸ್ ಮಾರಾಟ ಆಗುತ್ತಿರುವುದು ಹಾಗೂ ವಿದ್ಯಾರ್ಥಿಗಳು ಡ್ರಗ್ಸ್ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇದರ ಬಗ್ಗೆ ನಿಗಾ ಇಡಲು.
* ಕಾಲೇಜು, ವಿವಿಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿ ಆಗುತ್ತಿವೆ. ಇಂತಹ ಕೇಸ್‌ಗಳ ಮೇಲೆ ನಿಗಾ ಇಡಲು.
* ವಿವಿ, ಕಾಲೇಜು ಕ್ಯಾಂಪಸ್‌ಗಳಲ್ಲಿ ಅಕ್ರಮ ಚಟುವಟಿಕೆ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಇದನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆಗೆ ನಿರ್ಧಾರ.

Leave a Reply

Your email address will not be published. Required fields are marked *