ಬೆಂಗಳೂರು: ರೈತರು ತಾವು ಬೆಳೆದಂಥ ಬೆಳೆಗೆ ಬೆಂಬಲ ಬೆಲೆ ಸಿಗುವವರೆಗೂ ಕಾಯಬೇಕಾದಂತ ಪರಿಸ್ಥಿತಿ ಒಂದು ಕಡೆಯಾದರೆ, ಈಗ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಪ್ರತಿ ಕ್ವಿಂಟಲ್ ಗೆ 6,783 ರೂಪಾಯಿ ನಿಗದಿಪಡಿಸಿದ್ದು ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ ,ಬಳ್ಳಾರಿ ಚಿತ್ರದುರ್ಗ, ಗದಗ ಮತ್ತು ಬಾಗಲಕೋಟೆ ,ದಾವಣಗೆರೆ ರಾಯಚೂರು ,ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ಸಚಿವರು ತಿಳಿಸಿದ್ದಾರೆ. ಹಾಗೆ ಬೆಂಬಲ ಬೆಲೆ ಯೋಜನೆ ಅಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಈ ಬಗ್ಗೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
Related Posts
ಗೃಹಲಕ್ಷ್ಮೀ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ
ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಹಲವು ಮಹಿಳೆಯರ ಬದುಕಿಗೆ ಜೀವನಾಧಾರವಾಗಿದೆ. ಇಲ್ಲೋರ್ವ ರೈತ ಮಹಿಳೆ ಗೃಹಲಕ್ಷ್ಮೀ ಹಣದಿಂದ ಎತ್ತುಗಳನ್ನು ಖರೀದಿಸಿದ್ದಾರೆ. ಬೆಳಗಾವಿ…
ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಗೆಲುವು
ಹೈದರಾಬಾದ್: ಟಿ20 ವಿಶ್ವಕಪ್ 2024ರ ಅಂತಿಮ ಹಣಾಹಣಿಯಲ್ಲಿ ಭಾರತ ಟಿ 20 ವಿಶ್ವಕಪ್ ಗೆದ್ದು ಬೀಗಿದೆ. ಅಂತಿಮವಾಗಿ ಐಸಿಸಿ ಕಪ್ ಗೆದ್ದು ಭಾರತ ತನ್ನ ಪಾರಮ್ಯ ಮೆರೆದಿದೆ. ಭಾರತ…
ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮಾರಾಟಕ್ಕೆ ಚಿಂತನೆ
ಮಂಗಳೂರು: ಮದ್ಯಪ್ರಿಯರಿಗೆ ಸಿಹಿ ಸುದ್ದಿ ಇಲ್ಲಿದೆ. ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಮಂಗಳೂರಿನಲ್ಲಿ ನಡೆದ ಕನೆಕ್ಟ್ -2024ರಲ್ಲಿ…