CM ಕುರ್ಚಿ ಕಾಳಗಕ್ಕೆ ಹೊಸ ಮಸಾಲೆ: ಯತೀಂದ್ರ ಹೇಳಿಕೆ ಹಿನ್ನೆಲೆ ಗೋಜಿನ ರಾಜಕೀಯ.
ಬೆಳಗಾವಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕುರ್ಚಿ ಸಂಘರ್ಷಕ್ಕೆ ತೆರೆಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಸಿಎಂ ಕುರ್ಚಿಗಾಗಿ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಹೈಕಮಾಂಡ್ ಕುಳಿತು ಬಗೆಹರಿಸಿಕೊಳ್ಳುವಂತೆ ಸಿದ್ದರಾಮಯ್ಯ ,ಡಿಕೆ ಶಿವಕುಮಾರ್ಗೆ ಖಡಕ್ ಸೂಚನೆ ನೀಡಿತ್ತು. ಅದರಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮಾಡುವ ಮೂಲಕ ಯಾವುದೇ ಗೊಂದಲ ಇಲ್ಲ. ನಾವಿಬ್ಬರೂ ಒಂದಾಗಿದ್ದೇವೆ ಎನ್ನುವ ಸಂದೇಶ ರವಾನಿಸಿದ್ದರು. ಆದ್ರೆ, ಸದ್ಯಕ್ಕೇನು ಸುಮ್ನೆ ಆಗಿರಬಹುದು. ಆದ್ರೆ, ಬೆಳಗಾವಿ ಅಧಿವೇಶನದ ಬಳಿಕ ಪಿಚ್ಚರ್ ಬಾಕಿ ಹೈ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿ ಅಧಿವೇಶನದ ವೇಳೆಯಲ್ಲೇ ಮತ್ತೆ ಸಿಎಂ ಕುರ್ಚಿ ಕಾಳಗ ಶುರುವಾಗಿದ್ದು, ಇದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯನವರ ಪುತ್ರ, ಎಂಎಲ್ಸಿ ಯತೀಂರ್ರ ಸಿದ್ದರಾಮಯ್ಯ ಕಹಳೆ ಮೊಳಗಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಅಧಿವೇಶನದ ನಡುವೆಯೇ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ.
ಪುತ್ರನನ್ನು ಕರೆದೊಯ್ದು ಸಿಎಂ ರಹಸ್ಯ ಮಾತುಕತೆ.
ಹೌದು…ಚಳಿಗಾಲ ಅಧಿವೇಶದ ನಡೆಯುತ್ತಿರುವಾಗಲೇ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್ ಮನೆಯಲ್ಲಿ ಕಿಡಿ ಹೊತ್ತಿಸಿದೆ. ಎಲ್ಲವೂ ಕೂಲ್ ಆಯ್ತು ಎನ್ನುವಾಗಲೇ ಮತ್ತೆ ಸಿಎಂ ಪುತ್ರ ಯತೀಂದ್ರ ಪವರ್ ಶೇರಿಂಗ್ ವಿಚಾರವಾಗಿ ಮಾತನಾಡಿದ್ದಾರೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತಾ ಹೈಕಮಾಂಡ್ ಕೂಡ ಸ್ಪಷ್ಟವಾಗಿ ಹೇಳಿದೆ ಎಂದು ಯತೀಂದ್ರ ಪುನರುಚ್ಛರಿಸಿದ್ದಾರೆ.ಸಿದ್ದರಾಮಯ್ಯನವರೇ ಪುತ್ರನ ಮೂಲಕ ಈ ರೀತಿ ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಬಣ ಕೆಂಡಾಮಂಡಲವಾಗಿದೆ. ಇದು ತೀವ್ರ ಸ್ವರೂಪಕ್ಕೆ ಹೋಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಕರೆದ ರಹಸ್ಯ ಚರ್ಚೆ ನಡೆಸಿದ್ದಾರೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH
.




