ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ: ಕೊಲೆಯಾದ ರೇಣುಕಾ ಸ್ವಾಮಿ ಪತ್ನಿ 3 ತಿಂಗಳ ಗರ್ಭಿಣಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಪಾತ್ರವಿದೆ ಎಂಬ ಪ್ರಾಥಮಿಕ ತನಿಖೆಯಲ್ಲಿ ಇಬ್ಬರ ಬಂಧನವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಸಿಟ್ಟಿನಲ್ಲಿ ದರ್ಶನ್ ಮತ್ತು ಅವರ ಗೆಳೆಯರು 33 ವರ್ಷದ ರೇಣುಕಾ ಸ್ವಾಮಿಯನ್ನು ಅಪಹರಿಸಿ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಪಟ್ಟಣಗೆರೆ ಜಯಣ್ಣ ಅವರಿಗೆ ಸೇರಿದ ಶೆಡ್ ಗೆ ಕರೆತಂದು ಹಲ್ಲೆ ನಡೆಸಿದ್ದರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿದೆ ಎನ್ನಲಾಗಿದೆ

ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ. ಇದರಿಂದ ಕೆರಳಿದ್ದ ಪವಿತ್ರಾ ಗೌಡ ಮತ್ತು ನಟ ದರ್ಶನ್ ಅವನನ್ನು ಕರೆಸಿ ಒಂದು ಗತಿ ಕಾಣಿಸಬೇಕೆಂದು ನಿಶ್ಚಯಿಸಿದ್ದರು ಎನ್ನಲಾಗುತ್ತಿದೆ

ಹತ್ಯೆಯಾಗಿರುವ ರೇಣುಕಾ ಸ್ವಾಮಿಗೆ ಕಳೆದ ವರ್ಷ ಜೂನ್ 28ರಂದು ವಿವಾಹವಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಮೊದಲ ವಾರ್ಷಿಕೋತ್ಸವ ಆಚರಿಸುವುದರಲ್ಲಿದ್ದ. ಅದಲ್ಲದೆ ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ. ಪತಿಯನ್ನು ಕಳೆದುಕೊಂಡ ನೋವಿನಲ್ಲಿ ಪತ್ನಿ ಮತ್ತು ರೇಣುಕಾಸ್ವಾಮಿ ಪೋಷಕು ತೀವ್ರ ದುಃಖದಲ್ಲಿದ್ದಾರೆ

ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದೆ.

ಹೀಗಾಗಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಲಾಗಿತ್ತು. ಜೂ. 8ರಂದು ರಾತ್ರಿ ಆತನನ್ನು ಬೆಂಗಳೂರಿಗೆ ಶೆಡ್‌ ಒಂದಕ್ಕೆ ಕರೆತಂದು ಬಲವಾಧ ಆಯುಧದಿಂದ ಅವರಿಗೆ ಹೊಡೆದು ಕೊಲೆಗೈದು, ಮೃತದೇಹವನ್ನು ಮೋರಿಗೆ ಎಸೆಯಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್‌ ಮೆಂಟ್‌ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು

Leave a Reply

Your email address will not be published. Required fields are marked *