ಚಾಮರಾಜನಗರ, ಮೈಸೂರು: ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಕರ್ನಾಟಕದ ಎರಡನೇ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಘೋಷಿಸಿದರು. ಅದೇನೆಂದರೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ರೀತಿಯೇ, ಮೈಸೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂನ ತೆರೆಯಲು ಸರ್ಕಾರ ತಯಾರಿ ನಡೆಸುತ್ತಿದೆ. ಕರ್ನಾಟಕದಲ್ಲಿ ಎರಡನೇ ಸ್ಟೇಡಿಯಂ ಭಾಗ್ಯ ಮೈಸೂರಿಗೆ ಸಿಕ್ಕಂತಾಗಿದ್ದು, ಇದರಿಂದ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸಿಕ್ಕಂತಾಗಿದೆ.

ಈ ಎರಡನೇ ಅಂತಾರಾಷ್ಟ್ರೀಯ ಕ್ರೀಡಾಂಗಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುದ್ದಿಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದೆ ಎನ್ನಲಾಗಿದೆ. ಅಲ್ಲದೇ ಈ ಯೋಜನೆಗಾಗಿ ಸರ್ಕಾರ ಈಗ ಭೂಮಿ ಗುರುತಿಸುವ ಕೆಲಸ ಆರಂಭಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿಗೆ ಸಂಪೂರ್ಣ ಸುಸಜ್ಜಿತ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಸಿಗಲಿದ್ದು, ಅದಕ್ಕಾಗಿ ಭೂಮಿಯನ್ನು ಗುರುತಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು. ಕಾರ್ಯವಿಧಾನಗಳನ್ನು ಪೂರ್ಣಗೊಳಿಸಬೇಕು ಮತ್ತು ಭೂಮಿಯನ್ನು ಆದಷ್ಟು ಬೇಗ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘಕ್ಕೆ (ಕೆಎಸ್ಸಿಎ) ಹಸ್ತಾಂತರಿಸಬೇಕು. ಕ್ರೀಡಾಂಗಣಕ್ಕಾಗಿ ಹುಯಿಲಾಲುವಿನಲ್ಲಿ ಸುಮಾರು 26 ಎಕರೆ ಭೂಮಿಯನ್ನು ಗುರುತಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಮೈಸೂರಿನಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವ ಹುಯಿಲಾಲು ಎಂಬ ಗ್ರಾಮವನ್ನು ಕ್ರೀಡಾಂಗಣ ನಿರ್ಮಿಸಲು ಆಯ್ಕೆ ಮಾಡಿದ್ದಾರೆ. ಸದ್ಯ ಇದಕ್ಕಾಗಿ ಸುಮಾರು 26 ಎಕರೆ ಭೂಮಿಯನ್ನು ಈ ಯೋಜನೆಗೆ ಮೀಸಲಿಡಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಈ ಹಿಂದೆ ಈ ಯೋಜನೆಯನ್ನು ಸಾತಗಳ್ಳಿಯಲ್ಲಿ ನಡೆಸಲು ಯೋಜಿಸಲಾಗಿತ್ತು. ಆದರೆ ಅಲ್ಲಿ ಸರೋವರವಿರುವ ಕಾರಣದಿಂದ ಪರಿಸರ ಸಂಬಂಧಿತ ಸಮಸ್ಯೆಗಳು ಉಂಟಾಗಬಹುದೆಂದು ನಿಗಾ ಇಡಲಾಗಿತ್ತು. ಆದ್ದರಿಂದ, ಅಧಿಕೃತತೆಗಳ ಬಗ್ಗೆ ತೊಂದರೆ ಇಲ್ಲದ ಹುಯಿಲಾಲು ಸ್ಥಳವನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ.
ಇನ್ನೂ ಸಚಿವ ಸಂಪುಟ ಸಭೆಯಲ್ಲಿ 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ ಮಾಡಿದೆ. PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ 1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು. ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.
ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ. ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ. ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ. ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು ಎಂದು ಸಚಿವ ಸಂಪುಟ ಸಭೆಯಲ್ಲಿ ತಿಳಿಸಲಾಗಿದೆ. ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದು, ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ. ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.