ಚನ್ನಪಟ್ಟಣ ಉಪಚುನಾವಣೆ || ನಿಖಿಲ್‌ ಸ್ಪರ್ಧೆ ಇಲ್ಲಾ: ಕುಮಾರಸ್ವಾಮಿ

ಎಚ್ಡಿ ಕುಮಾರಸ್ವಾಮಿ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ SIT

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಸ್ಪಷ್ಟಪಡಿಸಿದರು.

ಚನ್ನಪಟ್ಟಣ ಬಮೂಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಖಿಲ್ ಎರಡು ಬಾರಿ ಸೋತು ಅವನು ಅನುಭವಿಸುತ್ತಿರುವ ನೋವು ಏನೆಂದು ನನಗೆ ಮಾತ್ರ ಗೊತ್ತು. ಚನ್ನಪಟ್ಟಣ ಉಪಚುನಾವಣೆಗೆ ಯೋಗೇಶ್ವರ್ ಕಣಕ್ಕಿಳಿಯಬಹುದು. ಇಲ್ಲ ಜೆಡಿಎಸ್ ನವರೆ ಆಗಬಹುದು, ಎನ್ ಡಿಎ ಅಭ್ಯರ್ಥಿ ಯಾರೇ ಆದರೂ ನಾವು ಒಗ್ಗೂಡಿ ಕೆಲಸ ಮಾಡೋಣ ಎಂದು ಹೇಳಿದರು.

ಬಳಿಕ ಡಿಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಚನ್ನಪಟ್ಟಣ ನನ್ನ ಜೀವ’ ಎಂದು ಹೊಸ ನಾಟಕವಾಡಲು ಬಂದಿರುವ ಮಹಾನುಭಾವರೊಬ್ಬರು ಇಷ್ಟು ದಿನ ಎಲ್ಲಿ ಹೋಗಿದ್ದರು? ಜನರ ಕಷ್ಟಗಳೇನಾದರು ಕೇಳಿದ್ದರೇ? ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದಿದ್ದು, ಇವರೂ ಉಪಮುಖ್ಯಮಂತ್ರಿ ಯಾಗಿದ್ರಲ್ಲಾ ಇಲ್ಲಿಯವರೆಗೂ ಚನ್ನಪಟ್ಟಣ ಜ್ಞಾಪಕಕ್ಕೆ ಬರಲಿಲ್ಲವೇ? ಹೊಸದಾಗಿ ಜನಸಂಪರ್ಕ ಸಭೆ ಮಾಡುತ್ತಿದ್ದೀರಲ್ಲ ನಿಮ್ಮ ಸಹೋದರ ಮಾಡಿದ ಜನಸಂಪರ್ಕ ಸಭೆಗಳಿಂದ ಏನಾದರೂ ಪ್ರಯೋಜನವಾಯ್ತ ಎಂದು ಪ್ರಶ್ನಿಸಿದರು  

ಇತ್ತೀಚೆಗಷ್ಟೇ ಚನ್ನಪಟ್ಟಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಧಿಕಾರಿಗಳ ಸಭೆ ನಡೆಸಿದ್ದ ಸಂದರ್ಭ ಮೊಬೈಲ್‌ ಫೋನ್‌ಗಳನ್ನು ಬಳಕೆ ಮಾಡದಂತೆ ತಾಕೀತು ಮಾಡಿದ್ದಾರೆ. ಕನಕಪುರದಿಂದ ಗ್ರಾನೈಟ್ ಕಲ್ಲುಗಣಿಗಾರಿಕೆ ಮಾಡಿ ರಫ್ತು ಮಾಡಿದ್ದು ಬಿಟ್ಟರೆ ಕ್ಷೇತ್ರಕ್ಕೆ ಅವರು ಬೇರೆ ಯಾವ ಕೊಡುಗೆ ಕೊಟ್ಟಿದ್ದಾರೆ? ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ನಾನು ವಿಶ್ವ ದರ್ಜೆಯ ರೇಷ್ಮೆ ಮಾರುಕಟ್ಟೆಯನ್ನು ನಿರ್ಮಿಸಲು ಸಾಕಷ್ಟು ಕೊಡುಗೆ ನೀಡಿದ್ದೇವೆ ಮತ್ತು ಟೊಯೊಟಾ ಕಾರ್ಖಾನೆಯನ್ನು (ಬಿಡದಿಯಲ್ಲಿ) ತಂದಿದ್ದೇವೆ ಎಂದರು.

ಬಳಿಕ ಚನ್ನಪಟ್ಟಣದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವ ಅಲ್ಪಸಂಖ್ಯಾತ ಸಮುದಾಯದ ಸಾವಿರಾರು ಮತಗಳನ್ನು ಮರು ಸೇರ್ಪಡೆ ಮಾಡುವಂತೆ ಅಧಿಕಾರಿಗಳಿಗೆ ಒತ್ತಡ ಹಾಕಲಾಗುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಮುಸ್ಲಿಂ ಮತದಾರರಿಗಾಗಿ ನಾನು ಏನೆಲ್ಲಾ ಮಾಡಿದ್ದೇನೆಂದು ನೆನಪಿಸಿಕೊಳ್ಳಲಿ. ಇಷ್ಟೆಲ್ಲಾ ಮಾಡಿದರೂ ಕನಿಷ್ಟ ಪಕ್ಷಕ್ಕೆ ತಕ್ಕ ಪ್ರತಿಕ್ರಿಯೆಯಾದರೂ ಬೇಡವೇ ಎಂದು ಪ್ರಶ್ನಿಸುವ ಮೂಲಕ ತಮ್ಮ ಮಗನ ಸೋಲಿಗೆ ಕಾರಣರಾದ ಮುಸ್ಲಿಂ ಮುಖಂಡರ ವಿರುದ್ಧ ಕಿಡಿಕಾರಿದರು.

ಇದೇ ವೇಳೆ ಮನೆ ಬಾಗಿಲಿಗೆ ಸರ್ಕಾರ ತಂದು ಪರಿಹಾರ ಕಲ್ಪಿಸುವುದಕ್ಕಿಂತ ಮುಂಚೆ ಹಾಲು ಉತ್ಪಾದಕರಿಗೆ ಬಾಕಿ ಉಳಿದಿರುವ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಿ ರೈತರ ಹಿತ ಕಾಯಬೇಕೆಂದು ಕಿಡಿಕಾರಿದರು.

Leave a Reply

Your email address will not be published. Required fields are marked *