ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಇಂದು (ನವೆಂಬರ್ 3) ಮಹತ್ವದ ದಿನ. ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರಿ ಹಾಕುವ ಸಾಧ್ಯತೆ ಇದೆ. ಬೆಳಿಗ್ಗೆ 10 ಗಂಟೆಯ ಬಳಿಕ ದರ್ಶನ್ ಹಾಗೂ ಗ್ಯಾಂಗ್ನ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.
ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ ಆಗಲಿದೆ. ಆರೋಪಿಗಳ ಮೇಲೆ ಪೊಲೀಸರು ಹೇರಿರುವ ಆರೋಪಗಳನ್ನು ಓದಿ ಹೇಳಲಾಗುತ್ತದೆ. ಆರೋಪಗಳನ್ನು ಒಪ್ಪಿಕೊಳ್ಳುತ್ತೀರೆಯೇ ಎಂದು ಆರೋಪಿಗಳಿಗೆ ಕೇಳಲಾಗುತ್ತದೆ. ಆರೋಪಿಗಳು ತಮ್ಮ ಮೇಲಿರುವ ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷೆ ಪ್ರಕಟ ಆಗುತ್ತದೆ. ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ.
For More Updates Join our WhatsApp Group :
