ನಾಳೆ ಪ್ರಧಾನಿ ಮೋದಿಯನ್ನ ಭೇಟಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ!!!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3ರ ಗುರುವಾರ ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಮೇ ತಿಂಗಳಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಿದ್ದರಾಮಯ್ಯ ಅವರು ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಇದೇ ಮೊದಲು.

ಮೋದಿ

ಭಾರತೀಯ ಆಹಾರ ನಿಗಮ (FCI) ರಾಜ್ಯಕ್ಕೆ ಅಕ್ಕಿ ನಿರಾಕರಿಸುತ್ತಿದೆ ಎಂಬ ಆರೋಪ ಸೇರಿದಂತೆ ಹಲವು ವಿಷಯಗಳನ್ನು ಮುಖ್ಯಮಂತ್ರಿ ಪ್ರಸ್ತಾಪಿಸುವ ನಿರೀಕ್ಷೆಯಿದೆ. ಸಿಎಂ ಅವರು ಆಗಸ್ಟ್ 3 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (GST)ಯ ರಾಜ್ಯದ ಪಾಲಿನ ವರ್ಗಾವಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಿಗೆ ಮನವಿ ಮಾಡುವ ಸಾಧ್ಯತೆ ಇದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಿಎಂ ಸಭೆ ನಡೆಸಲಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಸ್ಥಿತಿಗತಿ ಕುರಿತು ಚರ್ಚೆ ನಡೆಸಲಿದ್ದಾರೆ. ಜುಲೈ 29 ರಂದು ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರೊಂದಿಗೆ ಬೆಂಗಳೂರು-ಮೈಸೂರು ಹೆದ್ದಾರಿಯ ಸುರಕ್ಷತೆಯ ವಿಷಯವನ್ನು ಪ್ರಸ್ತಾಪಿಸುವುದಾಗಿ ಸಿಎಂ ಹೇಳಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ಉದ್ಘಾಟನೆಯಾದಾಗಿನಿಂದ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಆಗಸ್ಟ್ 2 ರಂದು ದೆಹಲಿಗೆ ಆಗಮಿಸಲಿದ್ದಾರೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *