ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ನೀಲಗಿರಿ ಪ್ಲಾಂಟೇಶನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ನಿಗೂಢವಾಗಿ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ನೂರಾರು ಅರಣ್ಯ ಸಿಬ್ಬಂದಿ ಸೇರಿ ಪೊಲೀಸರು, ನೀಲಗಿರಿ ಪ್ಲಾಂಟೇಶನ್ ಮತ್ತು ಅರಣ್ಯದಲ್ಲಿ ಹುಡುಕಾಟ ನಡೆಸಿದರೂ ಕಳೆದ 6 ದಿನಗಳಿಂದ ಗಾರ್ಡ್ ಸುಳಿವು ಮಾತ್ರ ಸಿಗುತ್ತಿಲ್ಲ.

ಆರು ತಿಂಗಳ ಹಿಂದಷ್ಟೇ ವರ್ಗಾವಣೆ
ಜಿಲ್ಲೆಯ ಕಡೂರು ತಾಲೂಕಿನ ನೀಲಗಿರಿ ಪ್ಲಾಂಟೇಶನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೊಡಗು ಜಿಲ್ಲೆಯ ಕಾಲೂರು ಗ್ರಾಮದ 33 ವರ್ಷದ ಫಾರೆಸ್ಟ್ ಗಾರ್ಡ್ ಶರತ್, ಕಳೆದ 6 ದಿನಗಳಿಂದ ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಅರಣ್ಯ ವಿಭಾಗಕ್ಕೆ ಮಂಗಳೂರಿನ ಸುಳ್ಯದಿಂದ ಕಳೆದ 6 ತಿಂಗಳ ಹಿಂದೆ ವರ್ಗಾವಣೆಯಾಗಿ ಬಂದಿದ್ದರು.