Chikkamagaluru: ಮಳೆಯನ್ನ ಲೆಕ್ಕಿಸದೆ ಪ್ರತಿಭಟನೆಗಿಳಿದ ಹಮಾಲಿ ಕಾರ್ಮಿಕರು..!!

ಚಿಕ್ಕಮಗಳೂರು: ಕರ್ನಾಟಕ ಬಂದ್‍ಗೆ (Karnataka Bandh) ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ನಗರದಲ್ಲಿಯೂ (Chikkamagaluru) ಸಹ ಹಮಾಲಿ ಕಾರ್ಮಿಕರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದ್ದಾರೆ.

ಹಮಾಲಿ

ಪ್ರತಿಭಟನೆ ವೇಳೆ 300ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರ ಸಂಘಟನೆಗಳು ಭಾಗಿಯಾಗಿವೆ. ಈ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದ್ದಾರೆ. ಅಲ್ಲದೇ ಈ ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಿ ನಾಡಿನ ರೈತರ ಹಿತವನ್ನು ಕಾಪಾಡಬೇಕು. ಕಾವೇರಿ ನೀರನ್ನು ಈಗಲೇ ಈ ಪ್ರಮಾಣದಲ್ಲಿ ಹರಿಸಿದರೆ ಮಳೆ ಇಲ್ಲದ ಕಾರಣ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದ್ದಾರೆ. 

ನಗರದ ಐ.ಜಿ.ರಸ್ತೆಯಲ್ಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಭಾರೀ ಮಳೆ ಸುರಿದಿದೆ. ಆದರೂ ಕಾರ್ಮಿಕರು ಮಳೆಯ ಮಧ್ಯೆಯೇ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲೂ ಪ್ರತಿಭಟನೆಯ ಕಾವು ತೀವ್ರಗೊಳ್ಳುತ್ತಿದೆ. ಪ್ರತಿಭಟನೆ ವೇಳೆ ಯಾವುದೇ ಸಮಸ್ಯೆಗಳು ಎದುರಾಗದಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ಇದರ ನಡುವೆಯೇ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *