ಬೆಂಗಳೂರು: ಬೆಂಗಳೂರಿನಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ತೀವ್ರಗೊಂಡಿದೆ. ಯೋಜನೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ತೇಜಸ್ವಿ ಸೂರ್ಯ ಎರಡು ದಿನಗಳ ಹಿಂದೆ ಆರೋಪಿಸಿದ್ದರು. ಅಲ್ಲದೆ, ಯೋಜನೆ ಹೇಗೆ ಸಾಧಕವಲ್ಲ ಎಂಬುದನ್ನು ವಿವರವಾಗಿ ಪತ್ರಿಕಾಗೋಷ್ಠಿ ಮೂಲಕ ಬಹಿರಂಗಪಡಿಸಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ.

ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸರಣಿ ಸಂದೇಶ ಪ್ರಕಟಿಸುವ ಮೂಲಕ ತಿರುಗೇಟು ನೀಡಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ, ಸುರಂಗ ರಸ್ತೆ ಯೋಜನೆಯ ನೇತೃತ್ವ ವಹಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸಿದ್ಧವಿದ್ದೇನೆ ಎಂ ಸುರಂಗ ರಸ್ತೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ ಮತ್ತು ಸಾರ್ವಜನಿಕ ಚರ್ಚೆಗೆ ನೀವು (ಕಾಂಗ್ರೆಸ್ ಸರ್ಕಾರ) ನಿಜಕ್ಕೂ ಮುಕ್ತರಾಗಿದ್ದರೆ, ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಪ್ರಸ್ತಾಪಿಸುತ್ತಿದ್ದೇನೆ. ಸಮಯ ಮತ್ತು ಸ್ಥಳವನ್ನು ನೀವೇ ನಿಗದಿ ಮಾಡಿ. ಒಳಿತು ಕೆಡುಕುಗಳನ್ನು ಆರೋಗ್ಯಕರ ರೀತಿಯಲ್ಲಿ ಚರ್ಚಿಸುವುದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ. ನಿಮ್ಮಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇನೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.ದಿದ್ದಾರೆ.