ಉದ್ಘಾಟನೆಗೊಂಡ ಕೆಲ ತಿಂಗಳಲ್ಲೇ ಕುಸಿದೇ ಬಿಡ್ತು ಚೀನಾದ ಬೃಹತ್ ಹಾಂಗ್‌ಕ್ವಿ ಸೇತುವೆ.

ಉದ್ಘಾಟನೆಗೊಂಡ ಕೆಲ ತಿಂಗಳಲ್ಲೇ ಕುಸಿದೇ ಬಿಡ್ತು ಚೀನಾದ ಬೃಹತ್ ಹಾಂಗ್‌ಕ್ವಿ ಸೇತುವೆ.

ಚೀನಾ: ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಬೃಹತ್ ಹಾಂಗ್‌ಕ್ವಿ ಸೇತುವೆಯ ಒಂದು ಭಾಗ ಮಂಗಳವಾರ ನೋಡನೋಡುತ್ತಿದ್ದಂತೆ ಕುಸಿದು ಬಿದ್ದಿದೆ. ಮಧ್ಯ ಚೀನಾವನ್ನು ಟಿಬೆಟ್‌ಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಭಾಗವಾಗಿದ್ದ 758 ಮೀಟರ್ ಉದ್ದದ ಈ ಸೇತುವೆ ಇದಾಗಿದ್ದು, ಸೇತುವೆ ಕುಸಿದು ಬೀಳುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Weather monitor ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಬೃಹತ್ ‘ಹಾಂಗ್‌ಕ್ವಿ ಸೇತುವೆಯ ಒಂದು ಭಾಗ ಕುಸಿಯುವ ದೃಶ್ಯವನ್ನು ನೀವಿಲ್ಲಿ ನೋಡಬಹುದು. ಚೀನಾವನ್ನು ಟಿಬೆಟ್‌ಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಭಾಗವಾಗಿದ್ದ ಈ ಸೇತುವೆಯೂ ಸೆಪ್ಟೆಂಬರ್ ತಿಂಗಳಿನಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿತ್ತು.​​ ಆದರೆ ಉದ್ಘಾಟನೆಗೊಂಡ ಕೆಲ  ತಿಂಗಳಲ್ಲೇ  ಬೃಹತ್‌ ಸೇತುವೆ ಕುಸಿದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *