ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಂಣ || ನ21 ಕ್ಕೆ ಪವಿತ್ರಗೌಡ ಜಮಾಜಿ ಅರ್ಜಿ ವಿಚಾರಣೆ

ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಂಣ || ನ21 ಕ್ಕೆ ಪವಿತ್ರಗೌಡ ಜಮಾಜಿ ಅರ್ಜಿ ವಿಚಾರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗಳಾದ ನಟಿ ಪವಿತ್ರಾಗೌಡ, ನಾಗರಾಜು, ಲಕ್ಷ್ಮಣ್ ಮತ್ತು ಅನುಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ನವೆಂಬರ್ 21ಕ್ಕೆ ನಿಗದಿ ಪಡಿಸಿದೆ.

ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21ಕ್ಕೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಪವಿತ್ರಾಗೌಡ ಹಾಗೂ ಇತರೆ ಮೂವರು ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ.21ಕ್ಕೆ ನ್ಯಾಯಪೀಠ ಮುಂದೂಡಿದೆ.

ಈ ನಾಲ್ವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಕ್ರಮವಾಗಿ ಅ.14 ಮತ್ತು 16ರಂದು ಆದೇಶಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.

Leave a Reply

Your email address will not be published. Required fields are marked *