Cinema Update: ಧ್ರುವ ಜೊತೆ ‘ಕೆಡಿ’ ಚಿತ್ರದಲ್ಲಿ ಮೊದಲ ಬಾರಿಗೆ ಸ್ಕ್ರೀನ್ ಶೇರ್ ಮಾಡಿದ ನಟ ರಮೇಶ್ ಅರವಿಂದ್..!!

ಪ್ರೇಮ್ ಅಡ್ಡಾದಿಂದ ಬ್ರೇಕಿಂಗ್ ಸುದ್ದಿ. ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕೆಡಿ’ (KD) ಚಿತ್ರ ತಂಡಕ್ಕೆ ಮತ್ತೋರ್ವ ಖ್ಯಾತ ನಟನ ಆಗಮನವಾಗಿದ್ದು, ಧ್ರುವ ಸರ್ಜಾ ಜೊತೆ ಇದೇ ಮೊದಲ ಬಾರಿಗೆ ರಮೇಶ್ ಅರವಿಂದ್  ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಮಾಹಿತಿಯನ್ನು ಸ್ವತಃ ಪ್ರೇಮ್ ಅವರೇ ಬಹಿರಂಗ ಪಡಿಸಿದ್ದಾರೆ.

ಕೆಡಿ

ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ನಟಿಸಲಿದ್ದಾರೆ. ಸದ್ಯದಲ್ಲೇ ತಮ್ಮ ಭಾಗದ ಚಿತ್ರೀಕರಣದಲ್ಲೂ ಅವರು ಭಾಗಿಯಾಗಲಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ.

ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ ಅವರಿಗೆ  ಮತ್ತೊಂದು  ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಂಜಯ್ ದತ್,  ಹೀಗೆ  ಸ್ಟಾರ್‌ಗಳನ್ನ  ಸ್ಟಾರ್ ಡೈರೆಕ್ಟರ್ ಪ್ರೇಮ್  ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.

1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ  ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *