ಯಾದಗಿರಿ : ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾದಾಗ ಎ1 ಆರೋಪಿ ಸ್ಥಾನ ಖಾಲಿ ಇಡಲಾಗಿತ್ತು. ಈಗ ಪರಮಣ್ಣನನ್ನು ಬಂಧಿಸಿ ಎ1 ಆರೋಪಿ ಮಾಡಿದ್ದಾರೆ.
ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದ ಎಂದು ತಿಳಿದುಬಂದಿದೆ.
ಘಟನೆ ಹಿನ್ನಲೆ
ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಚಿರಾಡುವ ಶಬ್ದ ಕೇಳಿಬಂದಿತ್ತು. ಹೀಗಾಗಿ ಎಲ್ಲರೂ ಓಡೋಡಿ ಹೋಗಿದ್ದಾರೆ. ಅಷ್ಟರಲ್ಲಿ ಓರ್ವ ವಿದ್ಯಾರ್ಥಿನಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ದೃಶ್ಯ ಕಂಡುಬಂದಿತ್ತು.
ಕೂಡಲೇ ಸಹಪಾಠಿ ವಿದ್ಯಾರ್ಥಿನಿಯರು ಬಾಲಕಿಗೆ ಹೆರಿಗೆ ಮಾಡಿಸಿದ್ದರು. ಬಳಿಕ ವಸತಿ ಶಾಲೆಯ ಪ್ರಾಂಶುಪಾಲರು, ವಾರ್ಡನ್ ಹಾಗೂ ಸ್ಟಾಪ್ ನರ್ಸ್ಗೆ ವಿಷಯ ತಿಳಿದ ಕೂಡಲೇ ವಿದ್ಯಾರ್ಥಿನಿ ತಾಯಿಗೆ ವಿಷಯ ತಿಳಿಸಲಾಗಿತ್ತು. ಇನ್ನು ನವಜಾತ ಶಿಶುವನ್ನು ಶಹಾಪುರ ಸರ್ಕಾರಿ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಆಸ್ಪತ್ರೆಗೆ ದಾಖಲು ಮಾಡಿದ ಕೂಡಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮಾಹಿತಿ ಸಿಕ್ಕಿದೆ. ಆಯೋಗ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡು ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು. ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆ ಆದರೂ ಪ್ರಾಂಶುಪಾಲರಿಗೆ, ವಾರ್ಡನ್ ಹಾಗೂ ಸ್ಟಾಪ್ ನರ್ಸ್ಗೆ ಮಾಹಿತಿ ಇಲ್ಲದ ಕಾರಣಕ್ಕೆ ಮೂವರ ಮೇಲೆ ಕೇಸ್ ದಾಖಲು ಮಾಡಿ ಅಮಾನತ್ತು ಮಾಡಲಾಗಿದೆ. ಅಷ್ಟೇ ಅಲ್ಲದೆ ಪ್ರಕರಣವನ್ನ ಮುಚ್ಚಿ ಹಾಕಲು ಯತ್ನಿಸಿದ ವಿದ್ಯಾರ್ಥಿನಿಯ ಸಹೋದರನ ಮೇಲೂ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
For More Updates Join our WhatsApp Group :