ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್.
ದಾವಣಗೆರೆ : ಸಿಎಂ ಕುರ್ಚಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ನಲ್ಲಿ ಬಣ ಬಡಿದಾಟದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್ನಲ್ಲಿ ಜಂಟಿಯಾಗಿ ಪ್ರಯಾಣಿಸಿದ್ದಾರೆ. ನಾಯಕರ ಈ ಜಂಟಿ ಪ್ರಯಾಣ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನವಾ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲೂ ವಿಷಯ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಸಿಎಂ ಮತ್ತು ಡಿಸಿಎಂ ನಡೆ ನಾನಾ ರಾಜಕೀಯ ವಿಶ್ಲೇಷಣೆಗೆ ಒಳಗಾಗಿದೆ.
For More Updates Join our WhatsApp Group :



