ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಒತ್ತಾಯ : ED ಅಧಿಕಾರಿಗಳ ವಿರುದ್ಧ ದೂರು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಅಂತ ಹೇಳು ಎಂಬುದಾಗಿ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಅಂತ ಮಾಜಿ ಎಂಡಿ ಪೊಲೀಸರಿಗೆ ದೂರು ನೀಡಿದ್ದಾರೆ.ಈ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಪೊಲೀಸರಿಂದ FIR ದಾಖಲಿಸಿಕೊಳ್ಳಲಾಗಿದೆ.

ಈ ಕುರಿತಂತೆ ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಎಂಡಿ ಕಲ್ಲೇಶ್ ಅವರು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅದರಲ್ಲಿ ವಾಲ್ಮೀಕಿ ನಿಗಮದ ಹಗರಣ ಸಂಬಂಧ ಇಡಿ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಹೆಸರೇಳುವಂತೆ ಒತ್ತಡ ಹಾಕುತ್ತಿದ್ದಾರೆ. ಮಾನಸಿಕ ಹಿಂಸೆ ನೀಡಿ, ಕಿರುಕುಳ ನೀಡುತ್ತಿದ್ದಾರೆ ಅಂತ ಹೇಳಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವಂತ ಇಡಿ ಕಚೇರಿಯಲ್ಲಿನ ಸಹಾಯ ನಿರ್ದೇಶಕರಾದಂತ ಮುರಳಿ ಕಣ್ಣನ್ ಹಾಗೂ ಐಆರ್ ಎಸ್ ಅಧಿಕಾರಿಯಾದಂತ ಮಿತ್ತಲ್ ಎಂಬುವರು ನಿನಗೆ ಇಡಿ ಸಹಾಯ ಮಾಡಬೇಕೆಂದರೇ ನೀನು ಬರೆದು ಕೊಡಬೇಕು. ಎಂಜಿ ರೋಡ್ ಖಾತೆಗೆ ಹಣವನ್ನು ಸಿಎಂ ಸರ್, ನಾಗೇಂದ್ರ ಸರ್ ಮತ್ತು ಎಫ್ ಡಿ ನಿರ್ದೇಶನದಂತೆ ಮಾಡಿರುತ್ತೇನೆ. ಅವರ ಒತ್ತಡ ಇತ್ತು ಎಂದು ಬರೆದು ಕೊಡಲು ತಿಳಿಸಿರುತ್ತಾರೆ ಅಂತ ದೂರಿನಲ್ಲಿ ಆರೋಪಿಸಿದ್ದಾರೆ.

ಪದೇ ಪದೇ ಇದೇ ಪ್ರಶ್ನೆ ಕೇಳಿ ನಿನಗೆ 7 ವರ್ಷ ಜೈಲು ಶಿಕ್ಷೆ ಮಾಡಿಸುವವರೆಗೂ ಬಿಡುವುದಿಲ್ಲ. ಇಡಿ ಬಗ್ಗೆ ನಿನಗೆ ಗೊತ್ತಿಲ್ಲ. 2-3 ವರ್ಷ ನಿನಗೆ ಬೇಲ್ ಸಿಗುವುದಿಲ್ಲ. ನೀನೊಬ್ಬ ಅಪರಾಧಿ. ನಿನ್ನ ಹೇಳಿಕೆಯನ್ನು ನಾನು ಓದಿದ್ದೇನೆ. ಇದು ಪ್ರಯೋಜನಕ್ಕೆ ಬರುವುದಿಲ್ಲ. ಸಿಎಂ, ಮಾಜಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ಇಡಿ ಕಚೇರಿಯಲ್ಲಿ ಒತ್ತಡ ಹಾಕಿ, ಮಾನಸಿಕ ಹಿಂಸೆ, ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಾಲ್ಮೀಕಿ ನಿಗಮದ ಮಾಜಿ ಎಂಡಿ ಕಲ್ಲೇಶ್ ದೂರಿನ ಹಿನ್ನಲೆಯಲ್ಲಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ 2023ರ ಅಡಿಯಲ್ಲಿ ಯುಎಸ್ 3(5), 351)2) ಹಾಗೂ 352ರಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *