ಚಾಂಪಿಯನ್ ಆಗಿ ಹೊರಹೊಮ್ಮಿದ ರಾಜ್ಯ ತಂಡಕ್ಕೆ CM ಸನ್ಮಾನ.!

ಚಾಂಪಿಯನ್ ಆಗಿ ಹೊರಹೊಮ್ಮಿದ ರಾಜ್ಯ ತಂಡಕ್ಕೆ CM ಸನ್ಮಾನ.!

ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ ಭರ್ಜರಿ ಸಾಧನೆ.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಛತ್ತೀಸ್ ಗಢದಲ್ಲಿ ನಡೆದ ಪ್ರಥಮ ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟದಲ್ಲಿ ಪದಕ ಗಳಿಸಿದ ಕ್ರೀಡಾಪಟುಗಳನ್ನು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಸನ್ಮಾನಿಸಿದರು.

ಮಾರ್ಚ್ 23ರಿಂದ ಎಪ್ರಿಲ್ 3ರವರೆಗೆ ನಡೆದ ಈ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡ 32 ಚಿನ್ನ, 8 ಬೆಳ್ಳಿ ಮತ್ತು 7 ಕಂಚಿನ ಪದಕಗಳೊಂದಿಗೆ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ರಾಜ್ಯ ಒಲಂಪಿಕ್ ಅಸೋಸಿಯೇಷನ್  ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *