ಆಗಸ್ಟ್‌ 2ನೇ ವಾರದಲ್ಲಿ ಸಿಎಂ ಜನಸ್ಪಂದನ ಕಾರ್ಯಕ್ರಮ

ಕಲಬುರಗಿ: ಆಗಸ್ಟ್ ಎರಡನೇ ವಾರ ಅಥವಾ ಸ್ವಾತಂತ್ರ್ಯೋತ್ಸವದ ನಂತರ ಕಲಬುರಗಿಯಲ್ಲಿ ವಿಭಾಗೀಯ ಮಟ್ಟದ ‘ಜನ ಸ್ಪಂದನ’ ಸಭೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದರು.

ಕಲಬುರಗಿ ನಗರದ ಗುಲ್ಬರ್ಗ ವಿಶ್ವವಿದ್ಯಾಲಯ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಸಭೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ಖರ್ಗೆ ನಿನ್ನೆ ಸ್ಥಳ ಪರಿಶೀಲನೆ ನಡೆಸಿದರು.

ಬೆಂಗಳೂರಿನಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ವಿಶ್ವವಿದ್ಯಾಲಯ ಆವರಣಕ್ಕೆ ಭೇಟಿ ನೀಡಿದ ಪ್ರಿಯಾಂಕ್‌ಖರ್ಗೆ ಅವರು, ಸಭೆಯಲ್ಲಿ ಅಹವಾಲುಗಳೊಂದಿಗೆ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಫೌಜಿಯಾತರನ್ನುಮ್‌ಅವರಿಗೆ ನಿರ್ದೇಶನ ನೀಡಿದರು.

ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರಕರ್ನಾಟಕ ಭಾಗದ ಬಹುತೇಕಎಲ್ಲ ಜಿಲ್ಲೆಗಳ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಈ ವೇಳೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಸಮಗ್ರ ರೂಪುರೇಷೆ ಸಿದ್ದಪಡಿಸಬೇಕೆಂದು ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ ಮತ್ತು ಜೀವನೋಪಾಯಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸಹ ಇದೇ ವೇಳೆ ಕೆಲವು ಸಲಹೆಗಳನ್ನು ನೀಡಿದರು.

ಈ ವೇಳೆ ಪೂರ್ವಸಿದ್ಧತೆ ಕುರಿತು ಸಚಿವರಿಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜನರ ಅಹವಾಲುಗಳನ್ನು ಮೊದಲು ನೋಂದಣಿ ಮಾಡಿಕೊಳ್ಳಲಾಗುವುದು.ಆ ಬಳಿಕ ಸಂಬAಧಿಸಿದ ಇಲಾಖೆಯ ಮಳಿಗೆಗೆ ಅರ್ಜಿಗಳನ್ನು ರವಾನಿಸಲಾಗುವುದು.ಆಯಾ ಇಲಾಖೆಯ ಮುಖ್ಯಸ್ಥರು ಮುಖ್ಯಮಂತ್ರಿಗಳಿಗೆ ದೂರುಗಳ ಕುರಿತು ಅಗತ್ಯ ಮಾಹಿತಿ ನೀಡಲಿದ್ದಾರೆ ಎಂದರು.

Leave a Reply

Your email address will not be published. Required fields are marked *