CM Siddaramaiah ರಾಜಕೀಯ ಕಾರ್ಯದರ್ಶಿ ಗೆ ಕೊಕ್

CM Siddaramaiah ರಾಜಕೀಯ ಕಾರ್ಯದರ್ಶಿ ಗೆ ಕೊಕ್

ಬೆಂಗಳೂರು: ಆರ್ಸಿಬಿ ಚಾಂಪಿಯನ್ ಆದ ಖುಷಿಯಲ್ಲಿದ್ದ ಬೆಂಗಳೂರಿನಲ್ಲಿ ಇದೀಗ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದು, ಸುಮಾರು 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾಗಿರುವ ಗೋವಿಂದರಾಜ್ ಒತ್ತಡವೇ ಕಾಲ್ತುಳಿತ ಸಾವುಗಳಿಗೆ ಕಾರಣ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಎಂಎಲ್ಸಿ ಗೋವಿಂದರಾಜುಗೆ ಕೋಕ್ ನೀಡಲಾಗಿದೆ.

ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜನೆಗೆ ಸಿಎಂ ಮೇಲೆ ಒತ್ತಡ ಹೇರಿದ್ದ ಗೋವಿಂದರಾಜು ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೋಕ್ ನೀಡಲಾಗಿದೆ. ಗೋವಿಂದರಾಜು ಅವರು ಸದ್ಯ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದಾರೆ.

ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೂಲಕ ಕಾರ್ಯಕ್ರಮ ಆಯೋಜನೆ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ಸರ್ಕಾರ, ಗೋವಿಂದರಾಜು ಒತ್ತಡದಿಂದಲೇ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ಗೋವಿಂದರಾಜು ವಿರುದ್ಧ ಸಿಎಂ ಆಪ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತೆರವುಗೊಳಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *