ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಈ ಹಿಂದೆ ಜಾರಿ ನಿರ್ದೇಶನಾಲಯವು (ED) ವಿಚಾರಣೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ಮಾಡಲಾಗಿತ್ತು.
ಇದು ಕಾನೂನು ಬಾಹಿರ ಪ್ರತಿಭಟನೆ ಎಂಬ ಆರೋಪದ ಕೇಸ್ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 110 ಕಾಂಗ್ರೆಸ್ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಆ.29ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಿಎಂ ಹಾಗೂ ಡಿಸಿಎಂಗೆ ಸಮನ್ಸ್ ಜಾರಿಗೊಳಿಸಿದೆ. ಪ್ರತಿಭಟನೆ ಸಂಬಂಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ಕುರಿತು ಕೋರ್ಟ್ ಸಮನ್ಸ್ ನೀಡಿದೆ. ಕಾನೂನು ಬಾಹಿರ ಪ್ರತಿಭಟನೆ ಎಂದು ಪೊಲೀಸರು ದೂರು ದಾಖಲಿಸಿಕೊಂಡಿದ್ದರು.