34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ 'CBI' ತನಿಖೆಯ ಭೀತಿ : ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ!

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿವಿಧ ಇಲಾಖೆಗಳ ನೇಮಕಾತಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, 371ಜೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳ ಭರ್ತಿ ಕುರಿತು ಸೂಚನೆ ನೀಡಿದ್ದಾರೆ. ಅಲ್ಲದೆ 2023ರಲ್ಲಿ ಹೊರಡಿಸಿರುವ ಸುತ್ತೋಲೆ ಅನುಸರಿಸುವ ಕುರಿತು ಕ್ರಮಕ್ಕೆ ಆದೇಶಿಸಿದ್ದಾರೆ.

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಸಿಎಂ ಹೇಳಿದ್ದಾರೆ

Leave a Reply

Your email address will not be published. Required fields are marked *