CM ಸಿದ್ದರಾಮಯ್ಯ ಅವರಿಂದ ಮೈಸೂರು ನಗರದ ಅಭಿವೃದ್ಧಿಕಾರ್ಯಗಳ ಪರಿವೀಕ್ಷಣೆ..!

CM ಸಿದ್ದರಾಮಯ್ಯ ಅವರಿಂದ ಮೈಸೂರು ನಗರದ ಅಭಿವೃದ್ಧಿಕಾರ್ಯಗಳ ಪರಿವೀಕ್ಷಣೆ..!

ಕಾಲಮಿತಿಯಲ್ಲಿ ಕಾಮಗಾರಿಗಳು ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಅಧಿಕಾರಿಗಳಿಗೆ ಸಿಎಂ ಸೂಚನೆ

 ಮೈಸೂರು : ಮೈಸೂರು ನಗರದ ಅಭಿವೃದ್ಧಿ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳುವ ಜೊತೆಗೆ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿವೀಕ್ಷಣೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು.ಕೆಪಿಟಿಸಿಎಲ್ ನ ವತಿಯಿಂದ ಸುಮಾರು 871 ಕಿ.ಮೀ. ಕೇಬಲ್ ಗಳನ್ನು ಹಾಕಲಾಗುತ್ತಿದ್ದು, ಇದುವರೆಗೆ 277 ಕಿ.ಮೀ.ಪೂರ್ಣಗೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂಧ ಮೈಸೂರು ನಗರದ ಸೌಂದರ್ಯೀಕರಣಕ್ಕೆ ಸಹಕಾರಿಯಾಗಿದೆ ಎಂದರು.

ಮಹಾರಾಣಿ ಕಾಲೇಜಿನ ವಿದ್ಯಾರ್ಥಿ ನಿಲಯಗಳಿಗೆ ಸೂಕ್ತ ಸ್ಥಳಾವಕಾಶವಿರದ ಕಾರಣ, ಪ್ರಸ್ತುತ 1400 ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೊಸ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗುತ್ತಿದೆ ಎಂದರು.

ಕೇರಳದಲ್ಲಿ  ಮುಖ್ಯಮಂತ್ರಿಗಳ ಆಯ್ಕೆಗೆ ಪಕ್ಷದ ವರಿಷ್ಠರು, ಅಲ್ಲಿನ ರಾಜಕೀಯ ನಾಯಕರೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಂಡಿದ್ದಾರೆ. ಕೇರಳಂನಲ್ಲಿ  ಮೂರು ನಾಯಕರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದು, ಅವರಲ್ಲಿ ವಿ.ಡಿ.ಸತೀಶನ್ ಅವರನ್ನು  ಕೇರಳ ಮುಖ್ಯಮಂತ್ರಿಯಾಗಿ  ಆಯ್ಕೆ ಮಾಡಲಾಗಿದೆ ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *