ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ ತಿಳಿಸಿದೆ.