ಕಲಬುರಗಿ: ನಿರಂತರ ಮಳೆಯಿಂದ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಮಳೆ ಹಾನಿಯಿಂದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಇದೀಗ ರೈತರು ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
“ಸಾಲಮನ್ನಾ ಬೇಡಿಕೆ ಪರಿಶೀಲನೆ ಮಾಡುತ್ತೇನೆ” – ಸಿಎಂ
ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ರೈತರ ಸಾಲಮನ್ನಾ ಬೇಡಿಕೆಯನ್ನು ಪರಿಗಣಿಸುತ್ತೇವೆ, ಪರಿಶೀಲನೆ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ
ಹೇಗಾದರೂ ರಾಜ್ಯಕ್ಕೆ ಸಹಾಯ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ, ಪ್ರವಾಹ ಪರಿಹಾರ ಹಣವನ್ನು ನೀಡಿಲ್ಲ ಎಂದು ಸಿಎಂ ದೂರಿದರು.
“ನಾವು ಕೋರ್ಟ್ಗೂ ಹೋದಿದ್ದೇವೆ. ಆದರೂ ಸಹ ಕೇಂದ್ರ ಸರ್ಕಾರ ನಿರ್ಲಕ್ಷ್ಯವೇ ತೋರುತ್ತಿದೆ,” ಎಂದು ತಿಳಿಸಿದ್ದಾರೆ.
For More Updates Join our WhatsApp Group :




