ಕರ್ನಾಟಕದಾದ್ಯಂತ ಮಂಜು ಮುಸುಕಿದ ವಾತಾವರಣವಿದ್ದು, ಸೂರ್ಯ ಸ್ವಲ್ಪ ತಡವಾಗಿ ಗೋಚರಿಸುತ್ತಿದ್ದಾನೆ. ಬೆಂಗಳೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಶುಭ್ರ ಆಕಾಶವಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಒಣಹವೆ ಇರಲಿದೆ. ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಾದರೆ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ್ಯಂತ ಡಿಸೆಂಬರ್ 20 ರವರೆಗೂ ಆಗಾಗ ಮಳೆಯಾಗುತ್ತಲೇ ಇತ್ತು. ಆದರೆ ಇದೀಗ ಶೀತ ಗಾಳಿ ಶುರುವಾಗಿದ್ದು ಚಳಿಗಾಲದ ಅನುಭವವಾಗತೊಡಗಿದೆ. ಜನವರಿ ಮೊದಲ ವಾರದವರೆಗೂ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲೂ ಚಳಿಯ ವಾತಾವರಣವಿರಲಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಒಣಹವೆ ಇರಲಿದೆ. ವಿಜಯಪುರದಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.