ಉತ್ತರದಲ್ಲಿ ಶೀತಗಾಳಿ, ದಕ್ಷಿಣದಲ್ಲಿ ಹಿತಕರ ವಾತಾವರಣ
ಬೆಂಗಳೂರು : ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವಾತಾವರಣ ಹೇಗಿದೆ. ಹವಾಮಾನ ಇಲಾಖೆ ನೀಡಿದ ಸೂಚನೆಗಳೇನು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು, ಕರ್ನಾಟಕದಾದ್ಯಂತ ಹವಾಮಾನವು ಮಿಶ್ರವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಿತಕರವಾದ ವಾತಾವರಣವಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ನಗರದಲ್ಲಿ ಇಂದು ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 16°C ಇರಲಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಮೋಡ ಕವಿದ ಹವಾಮಾನವಿರುತ್ತದೆ. ಮಳೆ ಬರುವ ಸಾಧ್ಯತೆ ತೀರಾ ಕಡಿಮೆ.
ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿ (Cold Wave) ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಭಾಗಗಳಲ್ಲಿ ಕನಿಷ್ಠ ತಾಪಮಾನವು ವಾಡಿಕೆಗಿಂತ ಕಡಿಮೆಯಾಗಲಿದೆ. ಇನ್ನು ಹೊನ್ನಾವರ, ಮಂಗಳೂರು ಮತ್ತು ಕಾರವಾರ ಭಾಗಗಳಲ್ಲಿ ಶುಷ್ಕ ಹವಾಮಾನವಿದ್ದು, ಗರಿಷ್ಠ ತಾಪಮಾನವು 33°C – 35°C ರವರೆಗೆ ದಾಖಲಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದ್ದು, ರಾತ್ರಿಯ ಸಮಯದಲ್ಲಿ ಚಳಿ ಹೆಚ್ಚಿರಲಿದೆ.
ಇನ್ನು ರಾಜ್ಯದ ಹವಾಮಾನ ವರದಿಯ ಪ್ರಕಾರ, ಕರ್ನಾಟಕದ ಬಯಲು ಪ್ರದೇಶವಾದ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 11.0°C ದಾಖಲಾಗಿದೆ. ಈ ಮಧ್ಯೆ, ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಶುಷ್ಕ ಹವಾಮಾನದ ಪರಿಸ್ಥಿತಿ ಇರಲಿದೆ. ಭಾಗಶಃ ಮೋಡ ಕವಿದಿರುತ್ತದೆ, ಬೆಳಗಿನ ಜಾವ ಮಂಜಿನ ವಾತಾರಣ ಇರಲಿದೆ. ಹಗಲು ಮತ್ತು ರಾತ್ರಿ ತಾಪಮಾನವು ಸ್ಥಿರವಾಗಿರುತ್ತದೆ . ಗರಿಷ್ಠ 27°C ಮತ್ತು ಕನಿಷ್ಠ 17°C ಹತ್ತಿರ ಇರುತ್ತದೆ. ಒಟ್ಟಾರೆಯಾಗಿ ರಾಜ್ಯದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದರೆ, ಉತ್ತರ ಭಾಗದಲ್ಲಿ ಚಳಿಯ ಪ್ರಭಾವ ಹೆಚ್ಚಿರುತ್ತದೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH




