ಪುತ್ತೂರಿನಲ್ಲಿ ಖಾಸಗಿ ಕಾಲೇಜು ಕಾರ್ಯಕ್ರಮದ ವೇಳೆ ವಿವಾದಾತ್ಮಕ ಭಾಷಣ ಆರೋಪ,
ಮಂಗಳೂರು : ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪತ್ತೆ ಎಫ್ಐಆರ್ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲು ಮಾಡಲಾಗಿದೆ. ಪುತ್ತೂರಿನ ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿದೆ ಎಂದು ಹೇಳಲಾಗಿದೆ. ಪುತ್ತೂರು ನಿವಾಸಿ ರಾಮಚಂದ್ರ ಕೆ. ಎಂಬುವವರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.
ಇನ್ನು ಇದರ ಜತೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಈ ಭಾಷಣವನ್ನು ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ ಚಾನಲ್ ಹಾಗೂ ಆಯೋಜಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಜನವರಿ 12ರಂದು ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ಕೋಮುದ್ವೇಷದ ವಿಚಾರಗಳು ಇತ್ತು ಎಂದು ಹೇಳಲಾಗಿದೆ. ಅವರು ವಿದ್ಯಾರ್ಥಿಗಳು ಹಾಗೂ ಪೋಷಕರ ಎದುರು ವಿವಾದಾತ್ಮಕ ಮಾತುಗಳನ್ನು ಆಡಿದ್ದಾರೆ ಎಂದು ಹೇಳಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ವಿವಿಧ ಗಂಭೀರ ಸೆಕ್ಷನ್ಗಳ ಮೂಲಕ ದೂರು ದಾಖಲಿಸಲಾಗಿದೆ.
ಮಾನವ ಬಂಧುತ್ವ ವೇದಿಕೆಯಿಂದ ದೂರು:
ಇನ್ನು ಕೋಮುದ್ವೇಷದ ಭಾಷಣ ಮಾಡಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಕೆ. ಅವರು ಪೋಲಿಸರಿಗೆ ದೂರು ನೀಡಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಪ್ರಭಾಕರ್ ಭಟ್ ಮಾಡುತ್ತಿದ್ದಾರೆ. ಈ ಹಿಂದೆ ನ್ಯಾಯಾಲಯವು ದ್ವೇಷ ಭಾಷಣ ಮಾಡದಂತೆ ಅವರಿಗೆ ಷರತ್ತು ವಿಧಿಸಿದ್ದರೂ, ಅದರ ಉಲ್ಲಂಘನೆ ಮಾಡಿ ಮತ್ತೆ ಇಂತಹ ಭಾಷಣವನ್ನು ಮಾಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಿಎನ್ ಎಸ್ (BNS) ಸೆಕ್ಷನ್ 196, 299, 302, 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಇನ್ಮುಂದೆ ಯಾವ ಕಾರಣಕ್ಕೂ ದ್ವೇಷದ ಭಾಷಣ ಮಾಡುವುದಿಲ್ಲ ಎಂದು ಹೇಳಿದರೂ. ಇದೀಗ ಅದರ ಉಲ್ಲಂಘನೆ ಆಗಿದೆ. ಇದೀಗ ಅವರಿಗೆ ಅವರಿಗೆ ಕಾನೂನುಬದ್ಧವಾಗಿ ದೊಡ್ಡ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.
For More Updates Join our WhatsApp Group :



