ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ

ಮನವಿ ಮಾಡಲಾಗಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ಸಚಿವ ಎಂ.ಬಿ.ಪಾಟೀಲ್, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಗಿ ಹಂಚಿಕೆ ಮಾಡಿದ್ದಾರೆ. ನಿಯಮಗಳ ಪ್ರಕಾರ ಆನ್ ಲೈನ್ ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಹಾಗೆ ಮಾಡದೆ ಕೈಗಾರಿಕಾ ಸಚಿವರ ಕಂಪನಿಗಳಿಗೆ ಭೂಮಿ ಹಂಚಲಾಗಿದೆ. ಬಿಡದಿ, ವಸಂತನರಸಾಪುರ, ಕೋಲಾರ, ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಕಾನುನು ಬಾಹಿರವಾಗಿ ನಿವೇಶನ ಹಂಚಲಾಗಿದೆ. ಇದಕ್ಕೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಇದರಿಂದಾಗಿ ಕೆಐಎಡಿಬಿಗೆ ಕೋಟ್ಯಂತರ ರೂಪಾಯಿ ನಷ್ಟವುಂಟಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವತೆ ದೂರು ನೀಡಲಾಗಿದೆ.

Leave a Reply

Your email address will not be published. Required fields are marked *