ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಅರ್ ದಾಖಲಿಸಿಕೊಳ್ಳುವಂತೆ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನ ಪಡೆದ ಸಂಬಂಧ ರಾಜ್ಯಪಾಲರು ಈಗಾಗಲೇ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕೆಂದು ಲೋಕಾಯುಕ್ತಕ್ಕೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.‌

ಭ್ರಷ್ಟಾಚಾರ, ಅಧಿಕಾರ ದುಬರ್ಳಕೆ, ನಕಲಿ ದಾಖಲಾತಿ ಸೃಷ್ಟಿ ಹಿನ್ನೆಲೆಯಲ್ಲಿ ಮುಡಾದಿಂದ 14 ನಿವೇಶನಗಳನ್ನು ಪಡೆದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಬೇಕೆಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.

ಮುಡಾ ಹಗರಣದಲ್ಲಿ ಈಗಾಗಲೇ ರಾಜ್ಯಪಾಲರು ಆಗಸ್ಟ್ 17ರಂದು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರಂತೆ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ. ಮುಖ್ಯಮಂತ್ರಿ ವಿರುದ್ಧ ಮುಡಾ ಹಗರಣ ಬಿಗಿಯಾಗುತ್ತಿದ್ದಂತೆ ಸಿದ್ದರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ರದ್ದು ಮಾಡುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆ ನಡೆಸಿರುವ ನ್ಯಾಯಾಲಯವು ಇಂದು ಮಧ್ಯಾಹ್ನಕ್ಕೆ ಮುಂದೂಡಿದೆ

Leave a Reply

Your email address will not be published. Required fields are marked *