ನಾಗಮಂಗಲದ ಹಿಂಸಾಚಾರದ ಹಿಂದೆ ಕಾಂಗ್ರೆಸ್ ಕೈವಾಡ : ಹೆಚ್.ಡಿ ಕುಮಾರಸ್ವಾಮಿ

ನಾಗಮಂಗಲದ ಹಿಂಸಾಚಾರದ ಹಿಂದೆ ಆಡಳಿತಾರೂಢ ಕಾಂಗ್ರೆಸ್ ಕೈವಾಡವಿದೆ: ಹೆಚ್ ಡಿ ಕುಮಾರಸ್ವಾಮಿ

ನಾಗಮಂಗಲದ ಹಿಂಸಾಚಾರದ ಹಿಂದೆ ಆಡಳಿತಾರೂಢ ಕಾಂಗ್ರೆಸ್ ಕೈವಾಡವಿದೆ: ಹೆಚ್ ಡಿ ಕುಮಾರಸ್ವಾಮಿ

ಮೈಸೂರು :  ಚನ್ನಪಟ್ಟಣ ವಿಧಾನಸಭಾ ಚುನಾವಣೆಯನ್ನು ಗುರಿಯನ್ನಾಗಿಸಿಕೊಂಢು ನಾಗಮಂಗಲದ ಹಿಂಸಾಚಾರದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಕೋಮುಗಲಭೆ ನಡೆದಿರುವುದು ಪೊಲೀಸ್ ಇಲಾಖೆಯ ವೈಫಲ್ಯದಿಂದ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಗಲಭೆ ಪೀಡಿತ ಪಟ್ಟಣಕ್ಕೆ ಭೇಟಿ ನೀಡಿದ ಹೆಚ್.ಡಿ ಕುಮಾರಸ್ವಾಮಿ ಇದು ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರದಂತೆಯೇ ಇದೆ, ಅಲ್ಲಿ ನಿಮಿಷಗಳಲ್ಲಿ ಭಾರಿ ವಿನಾಶ ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು ಎಂದರು.

ಎಫ್‌ಐಆರ್ ಪ್ರತಿಯನ್ನು ಹಿಡಿದುಕೊಂಡ ಬಂದ ಕುಮಾರಸ್ವಾಮಿ, ಪೊಲೀಸ್ ದಾಖಲೆಯಲ್ಲಿ ಹಲವು ನ್ಯೂನತೆಗಳಿವೆ ಇಲ್ಲಿ ಪೊಲೀಸರು ಅಸಮರ್ಥರಾಗಿದ್ದಾರೆ. ಘಟನೆ ನಡೆದಾಗ ಇನ್ಸ್ ಪೆಕ್ಟರ್ ಹಾಗೂ ಡಿವೈಎಸ್ ಪಿ ಸ್ಥಳದಲ್ಲಿ ಇರಲಿಲ್ಲ. ಮೀಸಲು ಪೊಲೀಸರನ್ನು ಬೇರೆ ಪ್ರದೇಶಕ್ಕೆ ಏಕೆ ಸ್ಥಳಾಂತರಿಸಲಾಯಿತು ಎಂದು ಪ್ರಶ್ನಿಸಿದ್ದಾರೆ

10 ನಿಮಿಷಗಳಲ್ಲಿ ಕಲ್ಲು, ಕಬ್ಬಿಣದ ರಾಡ್‌ಗಳು ಮತ್ತು ಪೆಟ್ರೋಲ್ ಬಾಂಬ್‌ಗಳನ್ನು ಹೇಗೆ ತಂದರು. ಘಟನೆಯ ಹಿಂದೆ ದೊಡ್ಡ ಪಿತೂರಿ ಇದೆ. ಇಷ್ಟು ದೊಡ್ಡ ಹಿಂಸಾಚಾರ ನಡೆದಿದ್ದನ್ನು ಗೃಹ ಸಚಿವ ಪರಮೇಶ್ವರ್ ಅವರು ಸಣ್ಣ ಘರ್ಷಣೆ ಎಂದು ಸಮರ್ಥಿಸಿಕೊಂಡಿದ್ದಾರೆ ಎಂದು ಸಹ ಕುಮಾರಸ್ವಾಮಿ ಆರೋಪಿಸಿದರು.

ಪೊಲೀಸರು ಮೆರವಣಿಗೆಗೆ ಅನುಮತಿ ನೀಡಿದ್ದರೂ, ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದರು.

ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರ ಅಮಾನತು ಕೇವಲ ಕಣ್ಣಾಮುಚ್ಚಾಲೆ ಆಟ ಮೆರವಣಿಗೆಯಲ್ಲಿದ್ದ ಯುವಕರು 10 ನಿಮಿಷಗಳ ಕಾಲ ಪಟ್ಟಣದ ಮಸೀದಿ ಎದುರು ನೃತ್ಯ ಮಾಡಲು ಪೊಲೀಸರು ಅವಕಾಶ ಮಾಡಿಕೊಟ್ಟಿದ್ದೇಕೆ ಎಂದು ಕಿಡಿಕಾರಿದರು

Leave a Reply

Your email address will not be published. Required fields are marked *