ಕೊಟ್ಟ ಮಾತಿನ ಭರವಸೆ, ‘ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ’.
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಫೈಟ್ ಮತ್ತೆ ಮುನ್ನೆಗೆ ಬಂದಿದ್ದು ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹಾರಿದ್ದರೆ, ಇತ್ತ ಡಿ.ಕೆ. ಸುರೇಶ್ ಸಹೋದರನ ಪರ ಅಖಾಡಕ್ಕಿಳಿದಿದ್ದಾರೆ. ಕೊಟ್ಟ ಮಾತಿನ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಂಸದ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನು ಉಳಿಸಿಕೊಳ್ತಾರೆ. ಆ ಬಗ್ಗೆ ನನಗೆ ಈಗಲೂ ಭರವಸೆ ಇದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಹೇಳಿಕೆ ಸಂಬಂಧವೂ ವ್ಯಂಗ್ಯವಾಡಿರುವ ಸುರೇಶ್, ಅವರು ಹೇಳಿದ ಮೇಲೆ ಅದೇ ವೇದ ವಾಕ್ಯ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲ ಶಾಸಕರಿಗೆ ಡಿಕೆಶಿ ವಿದೇಶ ಪ್ರವಾಸ ಆಯೋಜಿಸಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವಿದೇಶ ಪ್ರವಾಸಕ್ಕೂ ಡಿ.ಕೆ.ಶಿವಕುಮಾರ್ಗೂ ಸಂಬಂಧವಿಲ್ಲ. ಯಾರು ವಿದೇಶ ಪ್ರವಾಸ ಹೋಗ್ತಿದ್ದಾರೆ ಅವರನ್ನೇ ನೀವು ಕೇಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
‘ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ’
ನಿಗಮ ಮಂಡಳಿಯಲ್ಲಿ ಬಿಜೆಪಿ ಮುಖಂಡನಿಗೆ ಸ್ಥಾನ ನೀಡಿದ ವಿಚಾರವಾಗಿಯೂ ಸರ್ಕಾರದ ವಿರುದ್ಧ ಡಿ.ಕೆ.ಸುರೇಶ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಗೌರವಿಸುತ್ತದೆ ಅಂತಾಯ್ತಲ್ಲ. ರಾಜ್ಯ ಸರ್ಕಾರ ಎಲ್ಲರನ್ನೂ ಕೂಡ ಜೊತೆಗೆ ಕರೆದೊಯ್ಯಬೇಕು. ಕಾಂಗ್ರೆಸ್ ಪಕ್ಷದ್ದು ಸರ್ವಧರ್ಮ ಪಾಲಿಸಿ ಅಲ್ವಾ? ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಎಲ್ಲ ವಿಚಾರದಲ್ಲೂ ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಎರಡನೇ ಆದ್ಯತೆ ನೀಡಲಾಗುವುದು ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ನಡೆ ಬಗ್ಗೆ ಕಿಡಿ ಕಾರಿದ್ದಾರೆ.
For More Updates Join our WhatsApp Group :



