ಕಾಂಗ್ರೆಸ್ ಒಳಕಳಂಕ: ನಾಯಕತ್ವದ ಮೇಲೆ ಕಾದಾಟ.!

 ಕಾಂಗ್ರೆಸ್ ಒಳಕಳಂಕ: ನಾಯಕತ್ವದ ಮೇಲೆ ಕಾದಾಟ.!

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತ ಚರ್ಚೆಗಳು ತೀವ್ರ.!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ನಾಯಕತ್ವ ಬದಲಾವಣೆ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನಕ್ಕಾಗಿ ಹೈಕಮಾಂಡ್ ಜೊತೆ ಮಾತುಕತೆ ನಡೆಸುತ್ತಿರುವುದು ರಾಜಕೀಯ ಚಟುವಟಿಕೆಗಳಿಗೆ ಹೊಸ ತಿರುವು ನೀಡಿದೆ.

ಇತ್ತ ಸಿಎಂ ಸಿದ್ದರಾಮಯ್ಯ ತಮ್ಮ ನಾಯಕತ್ವವನ್ನು ಗಟ್ಟಿಮಾಡಿಕೊಳ್ಳಲು ತಂತ್ರ ರೂಪಿಸುತ್ತಿದ್ದು, ಗುಪ್ತಚರ ವಿಭಾಗದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ.ಇತಿಹಾಸದಲ್ಲೇ ಮೊದಲ ಬಾರಿಗೆ ನಾಲ್ಕು ಬಾರಿ ಗುಪ್ತಚರ ಮುಖ್ಯಸ್ಥರನ್ನು ಬದಲಾವಣೆ ಮಾಡಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಇದನ್ನು ತಂತ್ರಾತ್ಮಕ ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದು ಗಮನಾರ್ಹವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *