ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ. ಖಾಸಗಿ ವಾಹನಗಳಲ್ಲಿ ಆಗಮಿಸಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
20ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.
ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು. ವಿರೇಂದ್ರಗೆ ಸೇರಿದ ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್, ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್ ಸೇರಿ ಇತರೆ ಕಂಪನಿಗಳಿಂದ ಅಕ್ರಮ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಒಟ್ಟಾರೆಯಾಗಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿ 17 ಕಡೆ ದಾಳಿ ನಡೆದಿದೆ.
ಸದ್ಯ ಶಾಸಕ ಕೆಸಿ ವಿರೇಂದ್ರ ಹೊರರಾಜ್ಯದಲ್ಲಿದ್ದಾರೆ. ಇದೀಗ ಇಡಿ ದಾಳಿಯಿಂದ 2016 ರ ಐಟಿ ದಾಳಿ ವೇಳೆ ಪತ್ತೆಯಾದಂತೆ ಮತ್ತೊಂದು ಅಕ್ರಮ ಬಯಲಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.
For More Updates Join our WhatsApp Group :