1000 ದಿನಗಳ ಸಂಭ್ರಮ, ಭೂಗ್ಯಾರಂಟಿ ಹಕ್ಕುಪತ್ರ ವಿತರಣೆ.
ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳು ಕಳೆದಿವೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ಸಿಎಂ ಸಿದ್ದರಾಮಯ್ಯ ವಿತರಣೆ ಮಾಡಿದರು. ಆದರೆ ಇದೇ ಸಮಾವೇಶ ‘ದೋಸ್ತಿ’ಗಳ ವಾಕ್ಸಮರಕ್ಕೆ ವೇದಿಕೆ ಆಗಿತ್ತು.
ಸಮಾವೇಶದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ
ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಗ್ಯಾರಂಟಿಗಳನ್ನ ಯಾರು ವಿರೋಧ ಮಾಡ್ತಿದ್ರೋ, ಇಂದು ಅವರೇ ನಮ್ಮ ಗ್ಯಾರಂಟಿಗಳನ್ನ ಅನುಸರಿಸ್ತಿದ್ದಾರೆ. ಜನಸೇವೆಯ ಸಾರ್ಥಕ ಆಡಳಿತವನ್ನು ರಾಜ್ಯ ಸರ್ಕಾರ ನೀಡಿದೆ. 2 ವರ್ಷ 9 ತಿಂಗಳಲ್ಲಿ ಕೊಟ್ಟ ಮಾತಿನಂತೆ ಭರವಸೆ ಈಡೇರಿಸಿದ್ದೇವೆ. ಈಗಾಗಲೇ 243 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆ ಈಡೇರಿಸುತ್ತೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಗುಡುಗಿದರು.
ಬಿಜೆಪಿ ಅವಧಿಯಲ್ಲಿ ಶೇ.10ರಷ್ಟು ಭರವಸೆಯನ್ನೂ ಈಡೇರಿಸಿಲ್ಲ. ಇದೀಗ ರಾಜ್ಯ ಸರ್ಕಾರದ ಬಳಿ ಹಣವಿಲ್ಲವೆಂದು ಟೀಕೆ ಮಾಡುತ್ತಾರೆ. ಖಜಾನೆ ಖಾಲಿಯಾಗಿದೆ ಅಂತಾ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಗ್ಯಾರಂಟಿಗೆ 1.18 ಲಕ್ಷ ಕೋಟಿ ರೂ. ಹಣವನ್ನು ಖರ್ಚು ಮಾಡಿದ್ದೇವೆ. ಖಜಾನೆ ಖಾಲಿಯಾಗಿದ್ದರೆ ಇಷ್ಟು ಹಣ ಖರ್ಚು ಮಾಡಲು ಆಗುತ್ತಿರಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ದೇಶದ ಗ್ಯಾರಂಟಿ: ಡಿಸಿಎಂ ಡಿಕೆ ಶೀವಕುಮಾರ್
ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶೀವಕುಮಾರ್, ಬಿಜೆಪಿ, ಜೆಡಿಎಸ್ನವರು ಜನರಿಗಾಗಿ ಒಂದು ಕಾರ್ಯಕ್ರಮ ಕೊಟ್ಟಿದ್ದಾರಾ ಅಂತ ಆಕ್ರೋಶಭರಿತವಾಗಿ ಪ್ರಶ್ನಿಸಿದರು. ಬಿಜೆಪಿ ನಾಯಕರ ಟೀಕೆ, ಟಿಪ್ಪಣಿಗಳ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ನಾವೇನು ಮಾಡೋಕೆ ಆಗಲಿಲ್ಲ ಅಂತ ಈಗ ಕೈಕೈ ಹಿಸುಕಿಕೊಳ್ತಿದ್ದಾರೆ ಅಂತ ಗರಂ ಆದರು.
For More Updates Join our WhatsApp Group :




